ರಾಜ್ಯ

ಹಿಂದುಳಿದ ವರ್ಗಗಳ ಕಣ್ಮಣಿ ದೇವರಾಜ ಅರಸು ಭಾವಚಿತ್ರದ ಅದ್ಧೂರಿ ಮೆರವಣಿಗೆಃ ಡಿಸಿ ಇಕ್ರಮ್ ಶರೀಫ್ ಚಾಲನೆ

ಕಲಬುರಗಿ: ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಹರಿಕಾರರಾದ ಶ್ರೀ ಡಿ. ದೇವರಾಜ ಅರಸು ರವರ 111ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಅವರು ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಮಾಲಾರ್ಪಣೆ ಮಾಡಿ ಮೆರವಣಿಗೆ ಚಾಲನೆ ನೀಡಿದರು.ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಂಕನೂರ್,ಡಿ ದೇವರಾಜ ಅರಸು ರವರ ಜಯಂತಿ ಸಮಿತಿ ಅಧ್ಯಕ್ಷರಾದ ವಿನೋದ್ ಕುಮಾರ್ ಜೇನ್ವೇರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಂಗಮೇಶ್ವರ ಸೇರಿದಂತೆ ಅಧಿಕಾರಿಗಳು ಕಲಾ ತಂಡಗಳ ಭವ್ಯ ಮೆರವಣಿಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಲಬುರಗಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಅರಸು ಅವರ ಜಯಂತಿ ಆಚರಿಸಲಾಗುತ್ತಿದೆ.