ಕಲಘಟಗಿ ತಾಲೂಕಿನ ಸುರಶೆಟ್ಟಿಕೊಪ್ಪ ಗ್ರಾಮದಲ್ಲಿ ಗೃಹಲಕ್ಷ್ಮಿ ಹಣದಲ್ಲಿ ಹೊಲದಲ್ಲಿ ಬೋರ್‌ವೆಲ್ ಕೊರೆಯಿಸಿದ ಈರವ್ವ ಹಾಗೂ ಕುಟುಂಬ.
ಕಲಘಟಗಿ: ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಪ್ರಿಡ್ಜ್, ವಾಷಿಂಗ್ ಮಷಿನ್, ಹೋಲಿಗೆ ಯಂತ್ರ, ಬೀದಿಬದಿ ವ್ಯಾಪಾರ, ಆಸ್ಪತ್ರೆ ಖರ್ಚು, ಬಂಗಾರ ಹೀಗೆ ನಾನಾ ಕಾರ್ಯಗಳಿಗೆ ಬಳಕೆ ಮಾಡಿಕೊಂಡಿದ್ದನ್ನು ಕೇಳಿದ್ದೇವೆ. ಇಲ್ಲೋಬ್ಬ ಗೃಹಣಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 29 ಕಂತುಗಳ ಹಣದಿಂದ ಹೊಲದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಹಸನಾಗಿಸಿಕೊಂಡಿದ್ದಾರೆ.
ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ರೈತ ಮಹಿಳೆ ಈರವ್ವ ಅಂಗಡಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಸದ್ಬಳಕೆ ಮಾಡಿಕೊಂಡು ಮಾದರಿಯಾಗಿದ್ದಾರೆ. ಏ. 28ರಂದು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ 2 ಎಕರೆ ಹೊಲದಲ್ಲಿ ಬೋರ್‌ವೆಲ್ ಕೊರೆಸಿದ್ದು, ಇದರ ಫಲವಾಗಿ 5 ಇಂಚ ನೀರು ದೊರೆತಿದೆ. ಇದು ಈರವ್ವ ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ನಮಗೆ ತುಂಬ ಅನುಕೂಲವಾಯಿತು. ಸರ್ಕಾರಕ್ಕೆ ಧನ್ಯವಾದ ಎಂದು ಈರವ್ವ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಾಕ್ಷಿಯಾಗಿವೆ. ಅಷ್ಟೇ ಅಲ್ಲದೆ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತ ಬರುತ್ತಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನದ ಜಿಲ್ಲಾಧ್ಯಕ್ಷ ಎಸ್.ಆರ್. ಪಾಟೀಲ್ ಹೇಳಿದರು.