ಗ್ಯಾರಂಟಿ ಯೋಜನೆ ಎಲ್ಲ ವರ್ಗಕ್ಕೂ ಮೀಸಲು Guarantee scheme
ಕೋಲಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಹೋಬಳಿವಾರು ಅಥವಾ ಗ್ರಾಪಂ ಮಟ್ಟದಲ್ಲಿ ಸಭೆ ನಡೆಸಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೇಮಗಲ್ ವಿ.ಎಂ. ಮುನಿಯಪ್ಪ ತಿಳಿಸಿದರು.Guarantee scheme
ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಯೋಜನೆಯ ಪ್ರಾರಂಭದಲ್ಲಿ ಸಾಕಷ್ಟು ಸಮಸ್ಯೆ ಎದುರಾಗಿದ್ದವು. ಕ್ರಮೇಣ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದರು.
ತಾಲೂಕು ವ್ಯಾಪ್ತಿಯಲ್ಲಿ ಬಡವರ ಬಿಪಿಎಲ್ ಕಾರ್ಡ್ಗಳೂ ರದ್ದಾಗಿವೆ. ತಾಂತ್ರಿಕ ದೋಷಗಳಿಂದ ಕೆಲವರಿಗೆ ಗೃಹಲಕ್ಷಿ$್ಮ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಜತೆಗೆ ಅಕ್ಕಿ ವಿತರಣೆಯಲ್ಲೂ ದೂರುಗಳಿವೆ. ಈ ನಿಟ್ಟಿನಲ್ಲಿ ಪ್ರತಿ ಹೋಬಳಿವಾರು ಅಥವಾ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆ ಗುರುತಿಸಿ ಅವುಗಳನ್ನು ಅಲ್ಲಿಯೇ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.