H D Kumaraswamy (ಚಿತ್ರ X) 
ರಾಜ್ಯ

ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳಿದ ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ H D Kumaraswamy

ಬೆಂಗಳೂರು: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ (H D Kumaraswamy)
 ಅವರು ಸೋಮವಾರ ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸುವ ಮೂಲಕ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಕೇರಳದ ಕೊಚ್ಚಿಯಲ್ಲಿರುವ ಪ್ರಸಿದ್ಧ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳೊಂದಿಗೆ ಕುಮಾರಸ್ವಾಮಿ ಅವರು ಮಾಲಾಧರಣೆ ಮಾಡಿದರು. ದೇವಾಲಯದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಪವಿತ್ರ ಇರುಮುಡಿಕಟ್ಟನ್ನು ಸಿದ್ಧಪಡಿಸಿಕೊಂಡು, ಶಬರಿಮಲೆಯತ್ತ ತಮ್ಮ ತಂಡದೊಂದಿಗೆ ಪ್ರಯಾಣ ಬೆಳೆಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಶಾಸಕರಾದ ಶರಣಗೌಡ ಕಂದಕೂರ, ಮಾಗಡಿ ಮಾಜಿ ಶಾಸಕರಾದ ಮಂಜುನಾಥ್, ಹೆಚ್ ಎಮ್ ರಮೇಶ್ ಗೌಡ ಸೇರಿದಂತೆ 30 ನಾಯಕರುಗಳು ಕುಮಾರಸ್ವಾಮಿ ಅವರೊಂದಿಗೆ ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ.