ಕೊರಟಗೆರೆ :
ದೇವರಾಜ ಅರಸು ಅವರು ಜೀತ ಪದ್ಧತಿ ರದ್ದುಗೊಳಿಸಿ ವಸತಿ ಹಾಗೂ ಪಿಂಚಣಿ ಯೋಜನೆ ಜಾರಿಗೊಳಿಸುವ ಮೂಲಕ ಬಡವರ ಬದುಕಿಗೆ ಆಸರೆಯಾದರು ಎಂದು ತಹಸೀಲ್ದಾರ್ ಕೆ.ಮಂಜುನಾಥ್ ಹೇಳಿದರು.
ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯಲ್ಲಿ ವಾತನಾಡಿದರು.
ಉಪನ್ಯಾಸಕ ಹನುಮಂತ ನಾಯಕ್ ಮಾತನಾಡಿ, ವಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ವಾಡಲಾಯಿತು. ಕನ್ನಡ ನಾಡಿನ ಏಕೀಕರಣ, ಸಾವಾಜಿಕ ಪರಿವರ್ತನೆ, ರಾಜ್ಯದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಸ್ಮರಣೀಯ ಎಂದರು.
ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸವಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.