ರಾಜ್ಯದ ಹಲವೆಡೆ ವ್ಯಾಪಕ ಮಳೆ  
ರಾಜ್ಯ

ರಾಜ್ಯದಲ್ಲಿ ಮುರ್ನಾಲ್ಕು ದಿನ ಜೋರು ಮಳೆ : 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ - 'Yellow Alert' for 10 districts.

ಹರೀಶ್​​ ಕೆ.ಸಿ.
ಬೆಂಗಳೂರು: (Yellow Alert' for 10 districts) ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ವಾಯುಭಾರ ಕುಸಿತ ಪರಿಣಾಮ ಮುರ್ನಾಲ್ಕು ದಿನ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಮುಂಜಾನೆ ಮಳೆಯಾಗಿತ್ತು.
ಉಡುಪಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಸೆ.21ರಿಂದ ಸೆ.25ರವರೆಗೆ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮುಂದಿನ 4 ದಿನ ಜೋರು ಮಳೆ ಸುರಿಯುವ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಇದೇ ವೇಳೆ ಮಳೆ ಜತೆಗೆ ಗುಡುಗು, ಬಿರುಗಾಳಿಯೂ ಇರಲಿದೆ.
ಕೊಪ್ಪಳದಲ್ಲಿ ಮುಂದಿನ 2 ದಿನ, ಗದಗ, ಹಾವೇರಿ, ಮತ್ತು ಕಲಬುರಗಿಯಲ್ಲಿ ಸೆ.22ರಿಂದ ಮುಂದಿನ 3 ದಿನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ರಾಯಚೂರಿನಲ್ಲಿ ಸೆ.21ರಂದು ಬಿರುಸಾಗಿ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಘಟಕ ಅಧ್ಯಕ್ಷ ಸಿ.ಎಸ್.ಪಾಟೀಲ್ ಮಾತನಾಡಿ, ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಜೋರು ಮಳೆ ಇರಲಿದ್ದು, ಸಂಜೆ ಅಥವಾ ರಾತ್ರಿ ಸುರಿಯಲಿದೆ ಎಂದು ಮಾಹಿತಿ ನೀಡಿದರು.