ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯಲಿದೆ. ನಗರದಲ್ಲಿ ಮೇ 30ರಂದು ಜೋರಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಜತೆಗೆ, ಮೇ 31 ಮತ್ತು ಜೂ 1ರಂದು ಸಾಧಾರಣ ವರ್ಷಧಾರೆಯಾಗಲಿದೆ.
ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆ ಸುರಿಯಲಿದೆ. ಕೆಲ ಪ್ರದೇಶಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ.ದಾಖಲಾಗುವ ಸಾಧ್ಯತೆ ಇದೆ.
ಮಳೆ ಬೀಳುವ ಸಂದರ್ಭದಲ್ಲಿ ಎಚ್ಚರಿಕೆಯಿಂದಿರುವಂತೆ ವಾಹನ ಸವಾರರಿಗೆ ಇಲಾಖೆ ಸಲಹೆ ಕೊಟ್ಟಿದೆ.