ಭಾರತದ ಹಲವೆಡೆ ಮಳೆ  
ರಾಜ್ಯ

ಮುಂದಿನ 3-4 ದಿನ ಬಿರುಗಾಳಿ ಸಹಿತ ಭಾರೀ ಮಳೆ! ಈ ರಾಜ್ಯಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ | Weather Forecast

ಪ್ರಮುಖ ಮುಖ್ಯಾಂಶಗಳು

  • ಮುಂದಿನ 3ರಿಂದ 4 ದಿನಗಳಲ್ಲಿ ದೇಶದ ಹಲವೆಡೆ ವರುಣನ ಆರ್ಭಟ
  • ಕರ್ನಾಟಕ, ಅಸ್ಸಾಂ, ಒಡಿಶಾದಲ್ಲಿ ಬಿರುಗಾಳಿ ಸಹಿತ ಮಳೆ
ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿರುವ ನಾಡಿಗೆ ವರುಣನ ಕೃಪೆಯಿಂದ ಕೆಲವೆಡೆ ಭೂಮಿ ತಂಪಾಗಿದೆ (Weather Forecast). ಸುಡುವ ಬಿಸಿಲಿನಿಂದ ಹೊರಬರಲಾಗದೆ ಹೈರಾಣಾಗಿದ್ದ ಜನರಿಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುರಿದ ಮಳೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು

ಮೇ.16ರಿಂದ 20ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ.16 ಮತ್ತು 17ರಂದು ಲಕ್ಷದ್ವೀಪದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಹಗುರ ಮಳೆ ಸುರಿಯಬಹುದು. ಇನ್ನು 18ರಿಂದ 20ರಂದು ಆಂಧ್ರಪ್ರದೇಶ, ಯಾನಂ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಬಿರುಸಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಪೂರ್ವ ಭಾರತ

ಮೇ.16ರಿಂದ 22ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. 16ರಿಂದ 18, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು 16ರಿಂದ 22, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ಲಭಿಸಿದೆ,(ಏಜೆನ್ಸೀಸ್).