ಹೂವಿನಹಿಪ್ಪರಗಿ ಸಮೀಪದ ಅಗಸಬಾಳ ಗ್ರಾಮದಲ್ಲಿ ಪಿಎಂ-ಎಬಿಎಚ್‌ಐಎಂ ಯೋಜನೆ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿದರು. ಡಾ. ಪ್ರಕಾಶ ಗೊಡಗುಂಡಗಿ, ರಾಜಶೇಖರ ಚಿಂಚೋಳಿ, ಮಹೇಶ ಜಾಧವ್, ಹೀನಾಕೌಸರ ಪಟೇಲ ಇತರರಿದ್ದರು.
- ಶಾಸಕ ರಾಜುಗೌಡ ಪಾಟೀಲ ಹೇಳಿಕೆ
- ಭೂಮಿಪೂಜೆ
ಹೂವಿನಹಿಪ್ಪರಗಿ: ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಆರೋಗ್ಯ ಸೇವೆ ಲಭ್ಯವಾದರೆ ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಗಳಿಗೆ ಅಲೆದಾಡುವುದು ತಪ್ಪುವಂತಾಗುತ್ತದೆ ಆದ್ದರಿಂದ ಕ್ಷೇತ್ರದ ಅಗಸಬಾಳ ಗ್ರಾಮಕ್ಕೆ ಬಹುದಿನಗಳ ಬೇಡಿಕೆಯಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನಿಯರಿಂಗ್ ಘಟಕ ಬೆಂಗಳೂರು ಪಿಎಂ-ಎಬಿಎಚ್‌ಐಎಂ ಯೋಜನೆ ಅನುದಾನದ ಅಡಿ ಯಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ವಾಸ ಮಾಡುವುದರಿಂದ ಅವರಿಗೆ ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಲ್ಲಿ ಇಲ್ಲಿನ ಜನಗಳು ನಗರ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಲು ಇಲ್ಲಿ ಸುಸಜ್ಜಿತವಾದ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದೆ ಎಂದು ಹೇಳಿದರು.
ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಎಲ್ಲರಿಗೂ ಉಚಿತ ಸಮಗ್ರ ಆರೋಗ್ಯ ತಪಾಸಣೆ ಮಾಡಿಕೊಳ್ಳಿ ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನ ಹರಿಸಿ ನಾವುಗಳು ಆರೋಗ್ಯವಾಗಿದ್ದರೆ ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಅನುದಾನ ತಂದು ಹಂತ ಹಂತವಾಗಿ ಗ್ರಾಮವನ್ನು ಅಭಿವೃದ್ಧಿ ಪಡಿಸುವೆ ಎಂದರು.
ವೈದ್ಯಾಧಿಕಾರಿ ಡಾ. ಪ್ರದೀಪ, ತೋರಪ್ಪಗೌಡ ಪಾಟೀಲ, ಶ್ರೀಶೈಲ ಅಂಗಡಗೇರಿ, ಶಿವನಗೌಡ ಪಾಟೀಲ, ಸಂಗನಗೌಡ ಪಾಟೀಲ, ಚಂದು ಗುಂಡಾನವರ, ಮುರಗೇಶ ತಾಳಿಕೋಟಿ, ಭೀಮಣ್ಣ ಸಣ್ಣತಂಗಿ, ಗುತ್ತಿಗೆದಾರ ಮುಸಾ ಕಾಚಾಪೂರ, ಗ್ರಾಮಸ್ಥರು ಇತರರಿದ್ದರು.