ಮಹೇಶ್ ಶೆಟ್ಟಿ ತಿಮರೋಡಿ 
ರಾಜ್ಯ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದುಗೊಳಿಸಿದ ಹೈಕೋರ್ಟ್​

ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯಪೀಠವು ಅ.13ರಂದು ಆದೇಶ ಕಾಯ್ದಿರಿಸಿತ್ತು. ಆ ವೇಳೆ ಆದೇಶ ಪ್ರಕಟಿಸುವ ತನಕ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. 
ಸೋಮವಾರ ಆದೇಶ ಪ್ರಕಟಿಸಿರುವ ಹೈಕೋರ್ಟ್​, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಗಡಿಪಾರು ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ, ಗಡಿಪಾರು ಮಾಡುವುದು ಅಗತ್ಯವಾಗಿದ್ದರೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಸೂಚಿಸಿದೆ.
ಮಹೇಶ್ ಶೆಟ್ಟಿ ಪರ ವಾದ ಮಂಡಿಸಿದ ವಕೀಲರು, ಗಡಿಪಾರು ಆದೇಶ ನೀಡುವಾಗ ಸೂಕ್ತ ಕಾನೂನು ಕ್ರಮಗಳನ್ನು ಪಾಲಿಸಿಲ್ಲ. ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಸರಿಯಾದ ಮಾಹಿತಿ ನೀಡಿಲ್ಲ. ಸೂಕ್ತ ಸಾಕ್ಷಿಯಿಲ್ಲದೆ ಗಡಿಪಾರು ಮಾಡಲಾಗಿದೆ ಎಂದು ವಾದಿಸಿದ್ದರು.