ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ ಬಳಿ ಭೀಕರ ಅಪಘಾತ; ಗೂಡ್ಸ್ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾ* | Koppal

Koppal : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ(ಆ. 26) ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನರಗುಂದದ ಮಾಬೂಸಾಬ್ ವಟಗೇರಿ (17), ಫಕ್ರುಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ. ನರಗುಂದದಿಂದ ಕೊಪ್ಪಳದ ಈದ್ ಹಬ್ಬಕ್ಕೆ ತೆರಳುವಾಗ ರಸ್ತೆ ಬದಿ ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಈ ಘಟನೆ ನಡೆದಿದೆ.
ಗದಗದಿಂದ ಮೂವರು ಯುವಕರು ಪಲ್ಸರ್​ ಬೈಕ್​ನಲ್ಲಿ ಕೊಪ್ಪಳಕ್ಕೆ ತೆರಳುತ್ತಿದ್ದರು. ವೇಗವಾಗಿ ಬಂದ ಬೈಕ್​ ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟಾಟಾ ಸುಮೋಗೆ ಡಿಕ್ಕಿ ಹೊಡೆದಿದೆ. ಮೂವರ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಸ್ಥಳದಲ್ಲೇ ಅಸುನೀಗಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.