ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ(Mudigere) ತಾಲೂಕಿನಲ್ಲಿ ಶುಕ್ರವಾರ(ಆ. 07) ರಾತ್ರಿ ಸಿಲಿಂಡರ್ ತುಂಬಿಕೊಂಡು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಡಿಗೆರೆ ತಾಲೂಕು ಕೊಟ್ಟಿಗೆಹಾರದಲ್ಲಿ ರಾತ್ರಿ 1 ಗಂಟೆ ಸುಮಾರುಗೆ ಈ ಘಟನೆ ನಡೆದಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟಿದ್ದ ಕಾರು, ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದ್ದಾರೆ.
ಮೃತರನ್ನು ಗುರುಕಿರಣ್(28), ಮೋಹನ್(30) ಹಾಗೂ ಜ್ಞಾನೇಶ್(28) ಎಂದು ಗುರುತಿಸಲಾಗದೆ. ಗಾಯಾಳುಗಳಾದ ಪ್ರೇಮ್ ಕುಮಾರ್, ಹೃತಿಕ್ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತದ ಶಬ್ಧ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದು ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಸ್ದಳಕ್ಕೆ ,ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಾಗಿದೆ.