ಬಿಸಿ ವಾತಾವರಣ 
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ 3 ದಿನ ಬಿಸಿ ವಾತಾವರಣ-Hot

ಬೆಂಗಳೂರು: ಕರಾವಳಿ ವ್ಯಾಪ್ತಿಯ ಭೌಗೋಳಿಕ ಪ್ರದೇಶಗಳಲ್ಲಿ ಮುಂದಿನ 3 ದಿನ ಬಿಸಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಗರಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 3-4 ಡಿ.ಸೆ.ಕ್ಕಿಂತ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೇಲಿನ ಜಿಲ್ಲೆಗಳಲ್ಲಿ ಫೆ.18ರವರೆಗೆ ಬಿಸಿ, ತೇವಾಂಶದ ವಾತಾವರಣ ಕಂಡುಬರಲಿರುವ ಕಾರಣ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ದಾವಣಗೆರೆಯಲ್ಲಿ ಭಾನುವಾರ 11.5 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಕುಸಿತವಾಗಿದೆ. ಆದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಶುಭ್ರ ವಾತಾವರಣ ಇರಲಿದೆ. ಕೆಲ ಪ್ರದೇಶಗಳಲ್ಲಿ ಬೆಳಗ್ಗಿನ ಜಾವದಲ್ಲಿ ಮಂಜು ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿ.ಸೆ ಮತ್ತು 17 ಡಿ.ಸೆ. ದಾಖಲಾಗಬಹುದು.