ಕಲಬುರಗಿ: ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಂಯೋಗದೊಂದಿಗೆ ನಗರದ ಅಟಲ್ ಬಿಹಾರಿ ವಾಜಪಾಯಿ ಬಡಾವಣೆಯಲ್ಲಿ ಸ್ಥಾಪಿಸಲಾಗಿರುವ ಪ್ರಬುದ್ಧ ಅಕಾಡೆಮಿ ವತಿಯಿಂದ ಐಎಎಸ್ ಮತ್ತು ಕೆಎಎಸ್ ಪರೀೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಈ ತರಬೇತಿ ಸೀಮಿತವಾಗಿದ್ದು, ಯಾವುದೇ ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಕನಿಷ್ಠ 21 ವರ್ಷ ಮತ್ತು ಗರಿಷ್ಠ 37 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಮೇ 21ಕೊನೆ ದಿನ.
ಆಯ್ಕೆಯಾದ ಅಭ್ಯರ್ಥಿಗಳಿಗೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಿಂದ 10 ತಿಂಗಳು ಉಚಿತ ಮತ್ತು ಗುಣಮಟ್ಟದ ತರಬೇತಿ ನೀಡಲಾಗುತ್ತದೆ. ಪೂರ್ವಭಾವಿ ಪರೀೆ, ಮುಖ್ಯ ಪರೀೆ ಹಾಗೂ ಸಂದರ್ಶನ ಒಳಗೊಂಡಂತೆ ಮೂರೂ ಹಂತಗಳಿಗೆ ಸಂಪೂರ್ಣ ಮಾರ್ಗದರ್ಶನ ನೀಡಲು ಉದ್ದೇಶಿಸಿದೆ.
ಕರ್ನಾಟಕ ಪರೀಾ ಪ್ರಾಧಿಕಾರದ ಮೂಲಕ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸಂಪೂರ್ಣ ಅರ್ಹತೆ ಮತ್ತು ಪಾರದರ್ಶಕತೆಯ ಆಧಾರದ ಮೇಲೆ 500 ವಿದ್ಯಾರ್ಥಿಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಾಗುತ್ತದೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುವ ಮತ್ತು ಅವರಿಗೆ ಉನ್ನತ ಭವಿಷ್ಯ ರೂಪಿಸುವ ಮಹತ್ತರ ಉದ್ದೇಶದೊಂದಿಗೆ ಕಲಬುರಗಿಯಲ್ಲಿ ಅತ್ಯಾಧುನಿಕ ಪರೀಾ ಪೂರ್ವ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಪ್ರಬುದ್ಧ ಅಕಾಡೆಮಿಯು ಆಧುನಿಕ ತಂತ್ರಜ್ಞಾನ ಹೊಂದಿದ್ದು, ತಲಾ 125 ಆಸನ ಸಾಮರ್ಥ್ಯದ 4 ವಿಶಾಲವಾದ ತರಬೇತಿ ಕೊಠಡಿ ಸೇರಿ ಎಲ್ಲಾ ಸ್ಪರ್ಧಾತ್ಮಕ ಪರೀಾ ಪುಸ್ತಕಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಮತ್ತು ಡಿಜಿಟಲ್ ಲೈಬ್ರರಿ, ಸ್ವಯಂ ಅಧ್ಯಯನಕ್ಕಾಗಿ ಪ್ರತ್ಯೇಕ ಕ್ಯುಬಿಕಲ್ಸ್ ಮತ್ತು ತರಿಂದ ವೈಯಕ್ತಿಕ ಮಾರ್ಗದರ್ಶನಕ್ಕಾಗಿ ಮೆಂಟರಿಂಗ್ ಕೊಠಡಿಗಳು, ರಿಯಾಯಿತಿ ದರದಲ್ಲಿ ಗುಣಮಟ್ಟದ ಆಹಾರ ನೀಡುವ ಉಪಹಾರ ಕೇಂದ್ರ ಮತ್ತು ಪ್ರಶಾಂತ ಶೈಕ್ಷಣಿಕ ವಾತಾವರಣಕ್ಕಾಗಿ ಸುಂದರವಾದ ಗಾರ್ಡನ್ ಸೌಲಭ್ಯವೂ ಇದೆ.
ಸ್ಪರ್ಧಾತ್ಮಕ ಪರೀೆಗಳ ಪ್ರಸ್ತುತ ಬೇಡಿಕೆಗಳಿಗೆ ತಕ್ಕಂತೆ ಇಲ್ಲಿನ ಬೋಧನಾ ಕ್ರಮ ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಪರಿಕಲ್ಪನಾತ್ಮಕ ತಿಳಿವಳಿಕೆ, ವಿಶ್ಲೇಷಣಾತ್ಮಕ ಕೌಶಲ, ಪ್ರಚಲಿತ ವಿದ್ಯಮಾನಗಳ ಆಳವಾದ ಜ್ಞಾನ ಮತ್ತು ಸಂದರ್ಶನ ಎದುರಿಸುವ ಕಲೆ, ಆತ್ಮವಿಶ್ವಾಸ ಹೆಚ್ಚಿಸಲು ವಿಶೇಷ ಒತ್ತು ನೀಡಲಾಗುತ್ತದೆ. ಶೈಕ್ಷಣಿಕ ತರಬೇತಿಯ ಜತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಮಾರ್ಗದರ್ಶನವನ್ನೂ ನೀಡಲಾಗುತ್ತಿದ್ದು, ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನತೆ ತರಲು ಗಣನೀಯ ಕೊಡುಗೆ ನೀಡಲಿದೆ. ಕಲಬುರಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.