ಕ್ರಮ ವಾಪಸ್ ಪಡೆಯದಿದ್ದರೆ ಕೈಗೆ ತಕ್ಕ ಪಾಠ lesson
ಕೆಜಿಎಫ್: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತ ನಾಯಕರಾದ ಎಂಎಲ್ಸಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ವಿರುದ್ಧ ಕೈಗೊಂಡಿರುವ ಶಿಸ್ತು ಕ್ರಮದ ವಿರುದ್ಧ ಮುಸ್ಲಿಂ ಸಮುದಾಯ ಮತ್ತು ಉಲೇಮಾಗಳು (ಧಾರ್ಮಿಕ ಮುಖಂಡರು) ತೀವ್ರ ಆಕ್ರೋಶ ವ್ಯಕ್ತಪಡಿಸಿ ಪುನ@ ಪಕ್ಷಕ್ಕೆ ಕರೆದು ಅಧಿಕಾರ ಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದರು.lesson
ನಗರದ ಬಾಲಕೃಷ್ಣ ಬಡಾವಣೆಯ ಖಾಸಗಿ ಹಾಲ್ನಲ್ಲಿ ಅಂಜುಮನ್ ಇಸ್ಲಾಮಿಯಾ ಕೆಜಿಎಫ್ ಸಂಟನೆಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ದಾವಣಗೆರೆ ದಣ ಉಪ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿತ್ತು. ಇದಲ್ಲದೆ ಅಬ್ದುಲ್ ಜಬ್ಬಾರ್ ಅವರ ಮೇಲಿನ ಕ್ರಮಕ್ಕೂ ಸಮುದಾಯ ವಿರೋಧ ವ್ಯಕ್ತಪಡಿಸಿದೆ.
ಕರ್ನಾಟಕದ ಉಲೇಮಾ ಮತ್ತು ಮುಸ್ಲಿಂ ಸಂಟನೆಗಳ ಒಕ್ಕೂಟ ಈ ಕ್ರಮಗಳನ್ನು ಅಲ್ಪಸಂಖ್ಯಾತರನ್ನು ಗುರಿ ಮಾಡಲಾಗುತ್ತಿದೆ. ತಕ್ಷಣವೇ ಕ್ರಮ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದಾಗಿ ಸಭೆಯಲ್ಲಿ ಧರ್ಮಗುರುಗಳು ಎಚ್ಚರಿಕೆ ನೀಡಿದರು.
ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಗಟ್ಟಿ ಬೆಂಬಲ ನೀಡಿದ್ದ ಮುಸ್ಲಿಂ ಸಮುದಾಯಕ್ಕೆ ಈಗ ಅನ್ಯಾಯವಾಗುತ್ತಿದೆ. ಜಿಲ್ಲೆಯ ಕೆಜಿಎಫ್ ಮತ್ತು ಮುಳಬಾಗಿಲಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ನಾಯಕರ ವಜಾಗೊಳಿಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಬೆಳವಣಿಗೆಯು ಕರ್ನಾಟಕ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ರಾಜಕೀಯದ ಹೊಸ ವಿವಾದಕ್ಕೆ ಕಾರಣವಾಗಿದೆ ಎಂದು ಅಲ್ಲಾಸಂಖ್ಯಾತರ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.