ಬೆಳಗಾವಿ ಸದಾಶಿವನಗರದ ರಡ್ಡಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಸವರಾಜ ಬಾವಲತ್ತಿ, ರಾಮಣ್ಣ ಮುಳ್ಳೂರ ಮಾತನಾಡಿದರು. ಕಾಂತು ಜಾಲಿಬೇರಿ, ಪರಮೇಶ್ವರ ಮುಳ್ಳೂರ ಇತರರಿದ್ದರು.
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಪಕ್ಷದ ರಡ್ಡಿ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬೆಳಗಾವಿ ರಡ್ಡಿ ಸಂದ ಮಾಜಿ ಉಪಾಧ್ಯ ಬಸವರಾಜ ಬಾವಲತ್ತಿ ಎಚ್ಚರಿಕೆ ನೀಡಿದರು.
ಸದಾಶಿವನಗರದ ರಡ್ಡಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುಭವಿ ಹಾಗೂ ಜನಪರ ನಾಯಕರನ್ನು ಕಡೆಗಣಿಸಿರುವುದು ಬೇಸರದ ಸಂಗತಿ. ಸಚಿವ ಸಂಪುಟದಿಂದ ಎಚ್.ಕೆ.ಪಾಟೀಲ ಅವರನ್ನು ಕೈಬಿಟ್ಟಿರುವುದು ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಹುದ್ದೆ ನೀಡದಿರುವುದು ರೆಡ್ಡಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಪದಲ್ಲಿ ನಿಷ್ಠಾವಂತರಿಗೆ ಗೌರವ ಇಲ್ಲದಂತಾಗಿದೆ ಎಂಬ ಭಾವನೆ ಸಮುದಾಯದಲ್ಲಿ ಮೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಡ್ಡಿ ಸಂದ ಅಧ್ಯಕ್ಷ ರಾಮಣ್ಣ ಮುಳ್ಳೂರ ಮಾತನಾಡಿ, ರಾಜ್ಯದಲ್ಲಿ ಸುಮಾರು 80 ಲ ಜನಸಂಖ್ಯೆ ಹೊಂದಿರುವ ರಡ್ಡಿ ಸಮುದಾಯಕ್ಕೆ ಕನಿಷ್ಠ ನಾಲ್ವರು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಸರ್ಕಾರದಲ್ಲಿ ರಡ್ಡಿ ಸಮುದಾಯದ ಶಾಸಕರಿಗೆ ಪದೇಪದೆ ಅನ್ಯಾಯ ಆಗುತ್ತಿರುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ರ್ಖಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು. ಉಪಾಧ್ಯ ಕಾಂತು ಜಾಲಿಬೇರಿ, ಪರಮೇಶ್ವರ ಮುಳ್ಳೂರ, ಪ್ರಕಾಶ ಕಕರಡ್ಡಿ, ಮಂಜುನಾಥ ಪಾಟೀಲ, ಬಸವರಾಜ ಗಣಿ ಇತರರಿದ್ದರು.