ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿಶಾಲೆಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್​ ಶ್ರೀಯಾಂಕಾ ಧನಶ್ರೀ, ಟಿಎಚ್​ಒ ಡಾ.ಸಂಜೀವಕುಮಾರ ಪಾಟೀಲ್​ ಇತರರಿದ್ದರು. 
ರಾಜ್ಯ

ಕೆಲಸ ಮಾಡಲು ಆಗದಿದ್ರೆ ಜಾಗ ಖಾಲಿ ಮಾಡಿ

ಪ್ರಮುಖ ಮುಖ್ಯಾಂಶಗಳು

  • ಹಾಸ್ಟೆಲ್​ ಸಿಬ್ಬಂದಿ ವಿರುದ್ಧ ಸಚಿವ ಡಾ.ಶರಣಪ್ರಕಾಶ ಗರಂ
  • ಮುಧೋಳ ವಸತಿಶಾಲೆಗೆ ಭೇಟಿ
ಸೇಡಂ: ಗುಂಪುಗಾರಿಕೆ ಮಾಡುವುದಕ್ಕೆ ನೀವು ಇಲ್ಲಿಗೆ ಬಂದಿಲ್ಲ. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಆಗದಿದ್ದರೆ ಕೂಡಲೇ ಜಾಗ ಖಾಲಿ ಮಾಡಿ ಎಂದು ವೈದ್ಯಕಿಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಎಚ್ಚರಿಕೆ ನೀಡಿದರು.
ವಾಂತಿ, ಹೊಟ್ಟಿನೋವಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಮುಧೋಳದ ಇಂದಿರಾಗಾಂಧಿ ವಸತಿ ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರಿಕೆ ವಹಿಸಬೇಕು. ಅಡುಗೆ ಸಿಬ್ಬಂದಿ ಜಾಗೃತಿ ವಹಿಸಬೇಕು. ಅಲ್ಲದೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯಲ್ಲಿ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ನಿಮ್ಮ ಗಮನಕ್ಕಿಲ್ವಾ? ಯಾಕೆ ನಿಯೋಜನೆ ಮಾಡಿಲ್ಲ ? ಕೂಡಲೇ ಕ್ರಮಕೈಗೊಳ್ಳಬೇಕು. ಇನ್ನು ಅಡುಗೆ ಸಿಬ್ಬಂದಿ ಪ್ರಾಚಾರ್ಯರ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು ತಾಕೀತು ಮಾಡಿದರು.
ತಹಸೀಲ್ದಾರ್​ ಶ್ರೀಯಾಂಕಾ ಧನಶ್ರೀ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜೀವಕುಮಾರ ಪಾಟೀಲ್​, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸರಾಜ ಪಾಟೀಲ್​ ಊಡಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್​, ಭೂ ನ್ಯಾಯ ಮಂಡಳಿ ಅಧ್ಯಕ್ಷ ರವೀಂದ್ರ ನಂದಿಗಾಮ, ಪ್ರಮುಖರಾದ ಶ್ರೀನಿವಾಸರೆಡ್ಡಿ ಚಂದಾಪುರ, ವೆಂಕಟರಾಮರೆಡ್ಡಿ ಕಡತಾಲ, ಅಶೋಕ ಪಿರಂಗಿ ಇತರರಿದ್ದರು.
ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆ ಆಲಿಸಿದರು.
"

ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಸಾಕಷ್ಟು ಹೊಸ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ನಿಮ್ಮ ಶಾಲೆ ಸದಾ ವಿವಾದದಿಂದ ಸುದ್ದಿ ಆಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಟನೆ ಮರುಕಳಿಸಬಾರದು. ಇಲ್ಲಿ ಅಕ್ಷರ ಕಲಿಯುವುದಕ್ಕೆ ಗ್ರಾಮೀಣ ಭಾಗದ ಬಡ ಮಕ್ಕಳು ಬಂದಿದ್ದು, ಪ್ರತಿ ಶಿಕ್ಷಕರಲ್ಲೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇರಬೇಕು.

— > ಡಾ.ಶರಣಪ್ರಕಾಶ ಪಾಟೀಲ್​, ಸಚಿವ