- ಚಿಕ್ಕೋಡಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ
- ಆಹಾರ ಇಲಾಖೆ ಅಧಿಕಾರಿಗಳ ದಾಳಿ
- ಎರಡ ನೂರು ಕೆಜಿ ಅಕ್ಕಿ ವಶ
- ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಆಟೋದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ
| ಆಹಾರ ಇಲಾಖೆ ಅಧಿಕಾರಿಗಳು ದಾಳಿ ,ಅಕ್ಕಿ ವಶ
ಚಿಕ್ಕೋಡಿ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಆಟೋ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಭಾನುವಾರ ನಡೆದಿದೆ.
ಪಟ್ಟಣದ ನಿವಾಸಿ ಇಲಿಯಾಸ ಉಸ್ಮಾಯಿನ ದೇಸಾಯಿ ಆರೋಪಿಯಾಗಿದ್ದಾನೆ.ಆರೋಪಿತನು 200 ಕೆ.ಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಸಾಗಿಸುತ್ತಿರುವ ಖಚಿತ ಮಾಹಿತಿ ಆಹಾರ ಇಲಾಖೆ,ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಆಹಾರ ಇಲಾಖೆ ಶಿರಸ್ತೇದಾರ ಹಣಮಂತ ಖಾಂಡೇಕರ ನೇತೃತ್ವದಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿಯ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡ ಚಿಕ್ಕೋಡಿ ಪೊಲೀಸರು ತಿಳಿಸಿದ್ದಾರೆ.