Karnataka Weather Forecast 
ರಾಜ್ಯ

Karnataka Rain; ಕರಾವಳಿ, ಮಲೆನಾಡು ಪ್ರದೇಶದಲ್ಲಿ ವರುಣನ ಅಬ್ಬರ; ಕರ್ನಾಟಕದ 13 ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಿದ IMD

ಪ್ರಮುಖ ಮುಖ್ಯಾಂಶಗಳು

  • ರಾಜ್ಯದ 13 ಜಿಲ್ಲೆಗಳಿಗೆ ಮುಂದಿನ ಕೆಲವು ದಿನ ಯೆಲ್ಲೋ ಅಲರ್ಟ್ ಘೋಷಣೆ
  • ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ
  • ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ
ಬೆಂಗಳೂರು: ಈಗಾಗಲೇ ಕೇರಳಂಗೆ ಮುಂಗಾರು ಪ್ರವೇಶಿಸಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ(Karnataka Weather Forecast) ವರುಣಾರ್ಭಟ ಜೋರಾಗಿದೆ. ಈ ಹಿನ್ನೆಲೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ?

ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಮಯದಲ್ಲಿ ಗುಡುಗು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ ಎನ್ನಲಾಗಿದೆ. ಇನ್ನೂ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಬಹುದು ಎನ್ನಲಾಗಿದೆ.

ಬೆಂಗಳೂರಿನ ಕತೆ ಏನು?

ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆ ಶುರುವಾದ ಮಳೆ ರಾತ್ರಿಯಾದರೂ ಜಿಟಿ ಜಿಟಿ ಸುರಿಯುತ್ತಲೇ ಇತ್ತು. ಎಚ್​ಎಎಲ್​​, ಜಿಕೆವಿಕೆ ಪ್ರದೇಶದಲ್ಲಿ ತಲಾ 30 ಮಿ.ಮೀ ಮಳೆಯಾದರೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 20 ಮಿ.ಮೀ ಮಳೆಯಾಗಿದೆ. ಉಳಿದಂತೆ ಬೀದ‌ರ್, ಬೆಂಗಳೂರಿನ ಹೆಸರಘಟ್ಟ, ಹೊಸಕೋಟೆಯಲ್ಲಿ ತಲಾ 10 ಮಿ.ಮೀ ಮಳೆಯಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿದೆ.

ಕರಾವಳಿ ಪ್ರದೇಶದ ಸುತ್ತಮುತ್ತ ಭಾರೀ ಮಳೆ

ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡಿನಲ್ಲೂ ಯಬ್ಬರ

ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ, (ಏಜೆನ್ಸೀಸ್).