Impact of excessive technology on health
ಶಿಡ್ಲಗ್ಯಟ್ಟ : ತಂತ್ರಜ್ಞಾನದ ಅತಿಯಾದ ಬಳಕೆ ಶಿಕ್ಷಣ ಮತ್ತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಬೆಳ್ಳಾವಿಯ ವೀರ ಸಂಸ್ಥಾನ ಮಠದ ಶ್ರೀ ಮಹಾಂತ ಶಿವಾಚಾರ್ಯ ಎಚ್ಚರಿಸಿದರು.
ತಾಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀ ವರಮಹಾಲ್ಮಪೂಜೆ ಹಾಗೂ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಅತಿಯಾಗಿ ಮೊಬೈಲ್ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ. ಮೊಬೈಲ್ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಪಾಲಕರು ಹಾಗೂ ಶಿಕ್ಷಕರು ಮಕ್ಕಳನ್ನು ಮೊಬೈಲ್ ವ್ಯಸನದಿಂದ ದೂರವಿಟ್ಟು, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಬೇಕು. ಜ್ಞಾನದ ದಾರಿಯಲ್ಲಿ ನಡೆಯಲು ಮಕ್ಕಳಿಗೆ ಪ್ರೇರಣೆ ನೀಡಬೇಕು ಎಂದು ಕರೆ ನೀಡಿದರು.
ಶ್ರೀ ೇತ್ರ ಧರ್ಮಸ್ಥಳದ ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಜನರಲ್ಲಿ ದೈವಭಕ್ತಿ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಜಾಗೃತಗೊಳಿಸುತ್ತವೆ ಎಂದರು.
ಮಹಿಳೆಯರು ಮನೆ ಬೆಳಗುವ ದೀಪದಂತವರು. ಭಕ್ತಿ, ಸಂಸ್ಕಾರ ಹಾದಿಯಲ್ಲಿ ಸಾಗಿದಾಗ ಮಾತ್ರ ಕುಟುಂಬ ಹಾಗೂ ಸಮಾಜ ಸುಭಿಕ್ಷವಾಗಿರಲು ಸಾಧ್ಯ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಶಾಂತ್.ಸಿ.ಎಸ್ ಮಾತನಾಡಿ, ಕೇವಲ ಧರ್ಮವನ್ನು ರಸುವುದು ಮಾತ್ರವಲ್ಲದೆ, ದೈನಂದಿನ ಕೆಲಸ ಕಾರ್ಯಗಳಲ್ಲಿ ಧಾರ್ಮಿಕತೆಯನ್ನು ಅಳವಡಿಸಿಕೊಳ್ಳುವುದೇ ನಿಜವಾದ ಧರ್ಮ ಎಂದರು. ಹಿರಿಯರನ್ನು ಗೌರವಿಸುವುದು, ಕಿರಿಯರಿಗೆ ಆಶೀರ್ವದಿಸುವುದು ಮತ್ತು ಸಾತ್ವಿಕ ಜೀವನ ನಡೆಸುವುದೇ ಧರ್ಮ ರಕ್ಷಣೆ. ಇತರ ಧರ್ಮಗಳನ್ನು ದೂಷಿಸದೆ ನಮ್ಮ ಧರ್ಮದ ಶ್ರೇಷ್ಠತೆಯನ್ನು ಕಾಪಾಡಿಕೊಳ್ಳಬೇಕು ಎಂದರು.