ರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ 
ರಾಜ್ಯ

ಫಸಲ್ ಬಿಮಾ ಯೋಜನೆ ಅನುಷ್ಠಾನ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
  • ಕೃಷಿ ಸಹಾಯಕ ನಿರ್ದೇಶಕ ಜಿ.ಕಾಂತರಾಜು
ಬೇಲೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ತಾಲೂಕಿನ ರೈತರು ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ಕೃಷಿ ಸಹಾಯಕ ನಿರ್ದೇಶಕ ಜಿ.ಕಾಂತರಾಜು ತಿಳಿಸಿದ್ದಾರೆ.
ನಿಶ್ಚಿತ ಆದಾಯ ತರುವ ಉದ್ದೇಶದಿಂದ ಖಾಸಗಿ ಕಂಪನಿ ಸಹಯೋಗದಲ್ಲಿ ತಾಲೂಕು ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಬೀಮಾ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ಅರ್ಜಿಯೊಂದಿಗೆ ಭೂಮಿಯ ಪಹಣಿ/ಕಂದಾಯ ರಸೀದಿ/ಖಾತೆ ಪುಸ್ತಕ/ಬ್ಯಾಂಕ್‌ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮುಸುಕಿನ ಜೋಳ ಮತ್ತು ಭತ್ತದ ಬೆಳೆಗಳಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರತಿ ಎಕರೆಗೆ ರೈತರು ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಗೆ 546 ರೂ., ಮುಸುಕಿನ ಜೋಳ (ನೀರಾವರಿ) ಬೆಳೆಗೆ 617ರೂ. ಪಾವತಿಸುವ ಮೂಲಕ ಜು.31ರೊಳಗೆ ನೋಂದಾಯಿಸತಕ್ಕದ್ದು. ಮಳೆಯಾಶ್ರಿತ ರಾಗಿ ಬೆಳೆಗೆ 404 ರೂ., ಭತ್ತ (ನೀರಾವರಿ) ಬೆಳೆಗೆ 879 ರೂ. ಪಾವತಿಸುವ ಮೂಲಕ ಆ.14ರೊಳಗಾಗಿ ನೋಂದಾಯಿಸತಕ್ಕದ್ದು. ಅಂತೆಯೇ ಭತ್ತ (ಮಳೆಯಾಶ್ರಿತ) ಬೆಳೆಗೆ 612 ರೂ. ಪಾವತಿಸಿ ಜು.31ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ವಿಮಾ ಸಂಸ್ಥೆ, ಕೃಷಿ ಇಲಾಖೆ/ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಬೆಳೆ ಸಾಲ ನೀಡುವ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.