ಕಲಬುರಗಿ: ಕಲಬುರಗಿ ನಗರ ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಸಮಾರಂಭವು ಏಪ್ರಿಲ್ 28ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಸಿ.ಎ.ಆರ್. ಆವರಣ, ಪೊಲೀಸ್ ಕಾಲೋನಿಯಲ್ಲಿ ಜರುಗಲಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಗೌರವ ಉಪಸ್ಥಿತಿವಹಿಸುವರು.
ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ವಿಧಾನ ಪರಿಷತ್ ಶಾಸಕರುಗಳಾದ ಬಿ.ಜಿ. ಪಾಟೀಲ್, ಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ್, ಡಾ. ತಳವಾರ ಸಾಬಣ್ಣ, ಸುನೀ ಲ್ ವಲ್ಲ್ಯಾ ಪುರೆ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ರ‍್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ರ‍್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು
ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮಾನ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ. ಎ. ಸಲೀಂ, ಮಾನ್ಯ ಪೊಲೀಸ್ ಮಹಾ ನಿರ್ದೇಶಕ ಹಾಗೂ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನರ‍್ದೇಶಕ ಅರುಣ್ ಚಕ್ರರ‍್ತಿ,
ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್,ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಮಾನ್ಯ ಉಪ ಪೊಲೀಸ್ ಆಯುಕ್ತ ಪ್ರವೀಣ್ ಹೆಚ್. ನಾಯಕ, ಮುಖ್ಯ ಅಭಿಯಂತರರು ಪಿ.ಬಿ.ಪ್ರಕಾಶ್, ಈಶಾನ್ಯ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ರಾಜಕುಮಾರ ಬಾಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.