ಬಾಗಲಕೋಟೆ ಜಿಲ್ಲಾ ಬಾಲಭವನದಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಜಿಲ್ಲಾಽಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ, ನಿರೂಪಣಾಽಕಾರಿ ಮಂಜುನಾಥ ಪರಸನ್ನವರ, ಶಿಶು ಅಭಿವೃದ್ಧಿ ಯೋಜನಾಽಕಾರಿ ರಮೇಶ ಸೂಳಿಕೇರಿ, ಸಂಪನ್ಮೂಲ ವ್ಯಕ್ತಿಗಳಾದ ಪದ್ಮಾವತಿ ತಳ್ಳಿಕೇರಿ, ಭವಾನಿ ಕಂಬಾರ, ಸಂಸ್ಕೃತಿ ಕಾಂಬಳೆ ಇದ್ದರು.  
ರಾಜ್ಯ

ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿ

ಸಂತೋಷ ದೇಶಪಾಂಡೆ
ಬಾಗಲಕೋಟೆ: ನವನಗರದ ಜಿಲ್ಲಾ ಬಾಲಭವನದಲ್ಲಿ ೫ ರಿಂದ ೧೬ ವರ್ಷದ ಮಕ್ಕಳಿಗೆ ಹಮ್ಮಿಕೊಂಡ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳ ಉಚಿತ ಬೇಸಿಗೆ ಶಿಬಿರಕ್ಕೆ ಜಿಲ್ಲಾಽಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೫ ದಿನಗಳ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ೧೫ ದಿನಗಳ ಉಚಿತ ತರಬೇತಿ ನೀಡಲಾಗುತ್ತದೆ. ಈ ಅವಽಯಲ್ಲಿ ಮಕ್ಕಳಿಗೆ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ ಮತ್ತು ಯೋಗ, ಕರಾಟೆ, ವಿವಿಧ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಽಕಾರಿ ಮಂಜುನಾಥ ಪರಸನ್ನವರ ಮಾತನಾಡಿ, ಮಕ್ಕಳ ಬೇಸಿಗೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ೫ ರಿಂದ ೧೬ ವರ್ಷದ ಮಕ್ಕಳಿಗಾಗಿ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳನ್ನು ಒಳಗೊಂಡ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಽಕಾರಿ ರಮೇಶ ಸೂಳಿಕೇರಿ, ಸಂಪನ್ಮೂಲ ವ್ಯಕ್ತಿಗಳಾದ ಪದ್ಮಾವತಿ ತಳ್ಳಿಕೇರಿ, ಭವಾನಿ ಕಂಬಾರ, ಸಂಸ್ಕೃತಿ ಕಾಂಬಳೆ ಹಾಗೂ ಇಲಾಖೆಯ ಸುರೇಶ ಹುಲಮನಿ, ಕಮಲಾಕ್ಷಿ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.