ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ಅಕ್ಕಿ ಬದಲು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ಪೋಷಕಾಂಶ ಪದಾರ್ಥ ವಿತರಿಸುವ ಮಹತ್ವಾಕಾಂಕ್ಷೆ ‘ಇಂದಿರಾ ಕಿಟ್’ ಕಾರ್ಯಕ್ರಮ ಸ್ಥಗಿತಗೊಳ್ಳುವ ಸಾದ್ಯತೆ ಇದೆ.
ಕಾರ್ಡ್‌ದಾರರಿಗೆ ಅಕ್ಕಿ ಬದಲು ತೊಗರಿಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ಸಿದ್ದರಾಮಯ್ಯ ಸರ್ಕಾರವು ಬಜೆಟ್‌ನಲ್ಲಿ ೋಷಿಸಿತ್ತು. ಯೋಜನೆ ಅನುಷ್ಠಾನಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಸಾಕಷ್ಟು ಪೂರ್ವ ತಯಾರಿ ನಡೆಸಿತ್ತು. ಇಂದಿರಾ ಕಿಟ್ ವಿತರಣೆಗಾಗಿ ರಾಜ್ಯದ 31 ಜಿಲ್ಲೆಗಳನ್ನು ಐದು ವಿಭಾಗವಾಗಿ ವಿಗಂಡಿಸಿತ್ತು.
ಆಹಾರ ಪದಾರ್ಥಗಳ ಖರೀದಿದಾಗಿ ನಿಗಮ ಕರೆದಿದ್ದ ಟೆಂಡರ್‌ನಲ್ಲಿ ಅಂದಾಜು 20 ಕಂಪನಿಗಳು ಟೆಂಡರ್‌ನಲ್ಲಿ ಬಿಡ್ ಮಾಡಿದ್ದವು. ಆದರೆ, ತಮಗೆ ಬೇಕಾದ ಕಂಪನಿಗಳಿಗೆ ಟೆಂಡರ್ ನೀಡಲು ಸರ್ಕಾರದ ಮಟ್ಟದಲ್ಲಿ ಹಲವರು ಲಾಬಿ ನಡೆಸಿದ್ದರು. ಇದರಿಂದ ಬೇಸರಗೊಂಡ ಕೆಲವರು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದರು. ಇದರಿಂದ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಂಡಿತು. ಇದೀಗ ಷರತ್ತು ಸಡಿಲಿಸಿ ಮತ್ತೆ ಟೆಂಡರ್ ಕರೆಯಲಾಗುವುದು ಎಂದು ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಏಳೆಂಟು ತಿಂಗಳು ಕಳೆದರೂ ಟೆಂಡರ್ ಅಂತಿಮವಾಗಿಲ್ಲ. ಆದ್ದರಿಂದ, ಇಂದಿರಾ ಕಿಟ್ ವಿತರಣೆ ಪ್ರಸ್ತಾವ ಕೈಬಿಟ್ಟು, ಅಕ್ಕಿಯನ್ನೇ ಮುಂದುವರಿಸಲು ಸರ್ಕಾರದ ನಿರ್ಧರಿಸಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಸಚಿವ ಕೆ.ಎಚ್.ಮುನಿಯಪ್ಪ, ಸಹ ಯೋಜನೆ ಜಾರಿಗೆ ಸಂಬಂಧಿಸಿದಂತೆ ಹಲವು ಬಾರಿ ಹೇಳಿಕೆ ನೀಡಿದ್ದರೂ ಇದು ಕಾರ್ಯರೂಪಕ್ಕೆ ಬರಲಿಲ್ಲ.
ಸದಸ್ಯವಾರು ಆಹಾರಧಾನ್ಯ ಪ್ಯಾಕಿಂಗ್ ಮಾಡುವುದಕ್ಕೆ ಹೆಚ್ಚಿನ ಸಮಯ ಹಿಡಿಯುವುದು ಮತ್ತು ಖರೀದಿಸಿದ ಪದಾರ್ಥವನ್ನು ಪ್ರತ್ಯೇಕವಾಗಿ ಪ್ಯಾಕಿಂಗ್ ಮಾಡುವುದಕ್ಕೆ ದೊಡ್ಡ ಗೋದಾಮು ಬೇಕಾಗುತ್ತದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ ) ಕಾಯ್ದೆ ಅನ್ವಯ ತೊಗರಿಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಅಯೋಡಿನ್ ಉಪ್ಪು ಖರೀದಿಗಾಗಿ ಪ್ರತ್ಯೇಕವಾಗಿ ಕರೆದಿರುವ ಟೆಂಡರ್ ಪ್ರಕ್ರಿಯೆ ಮುಗಿಸಲು ನಿಗಮದ ಅಧಿಕಾರಿಗಳು ಹರಸಾಹಡ ಪಡುತ್ತಿರುವುದು. ದುರ್ಬಳಕೆ ತಡೆಗೆ ಕಿಟ್ ಮೇಲೆ ಕ್ಯೂ ಆರ್ ಕೋಡ್ ಅಳವಡಿಸುವುದು ಮತ್ತು ಪ್ರತಿ ತಿಂಗಳು 1.25 ಕೋಟಿ ಕಾರ್ಡ್‌ಗಳಿಗೆ 57,521 ಮೆಟ್ರಿಕ್ ಟನ್ ಆಹಾರ ಪದಾರ್ಥವನ್ನು ಗೋಡೌನ್‌ನಿಂದ ನ್ಯಾಯಬೆಲೆ ಅಂಗಡಿಗಳಿಗೆ ಕಿಟ್ ಸರಬರಾಜು ಮಾಡುವುದು ಇಲಾಖೆ ದೊಡ್ಡ ಸವಾಲು ಎದುರಾಗಲಿದೆ.