ಕಲಬುರಗಿ ಜವಳಿ ಪಾರ್ಕ್ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಬೆಂಗಳೂರು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು. ಡಾ.ಸೆಲ್ವಕುಮಾರ್ ಎಸ್, ರೋಹಿಣಿ ಸಿಂಧೂರಿ, ಗೋವಿಂದರೆಡ್ಡಿ ಇತರರಿದ್ದರು.
- ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
- * ಕಲಬುರಗಿ ಜವಳಿ ಪಾರ್ಕ್ಗೆ ಸಂಬಂಧಿಸಿದ ಅಧಿಕಾರಿಗಳ ಸಭೆ
ಕಲಬುರಗಿ: ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂ ಪಿಎಂ&ಮಿತ್ರ ಜವಳಿ ಪಾರ್ಕ್ ಯೋಜನೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ವೇಗವಾಗಿ ಅನುಷ್ಠಾನಗೊಳಿಸಲು ಮೊದಲ ಹಂತದ ಮೂಲಸೌಕರ್ಯ ನೀಲಿನೆ ಮತ್ತು ಆಡಳಿತಾತ್ಮಕ ಮಾರ್ಗಸೂಚಿ ಸಿದ್ಧಪಡಿಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಬಳಿ ಮೊದಲ ಹಂತದಲ್ಲಿ 1000 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಜವಳಿ ಪಾರ್ಕ್ ಕಾಮಗಾರಿ ಕುರಿತು ಚರ್ಚಿಸಲು ಬೆಂಗಳೂರು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.
ಮೊದಲ ಹಂತದಲ್ಲಿ 1000 ಎಕರೆ ಪ್ರದೇಶದಲ್ಲಿ ಪಾರ್ಕ್ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, ಹೂಡಿಕೆ ಮಾಡುವ ಉದ್ಯಮಗಳಿಗೆ ತಣವೇ ಉತ್ಪಾದನೆ ಆರಂಭಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಾಗತಿಕ ಮಟ್ಟದ ಮೂಲಸೌಕರ್ಯ ಒಳಗೊಂಡ ಪ್ಲಗ್ ಅಂಡ್ ಪ್ಲೇ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವ ಖರ್ಗೆ ಹೇಳಿದರು.
ಮೊದಲ ಹಂತದಲ್ಲಿ ಕೋರ್ ಮೂಲಸೌಕರ್ಯ ಕಾಮಗಾರಿ ಆರಂಭವಾಗಲಿದ್ದು, ಸಿವಿಲ್ ಮತ್ತು ಭೂ ಅಭಿವೃದ್ಧಿ, ಆಂತರಿಕ ರಸ್ತೆಗಳ ನಿರ್ಮಾಣ ಮತ್ತು ಮಳೆನೀರನ್ನು ಸುಲಭವಾಗಿ ಹೊರಹಾಕಲು ಸುಸಜ್ಜಿತ ಆರ್ಸಿಸಿ ಡೆನೇಜ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
5 ಲ ಲೀಟರ್ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಾಗಾರದ ಮೂಲಕ ಶುದ್ಧ ನೀರು ಸರಬರಾಜು ಜಾಲ ಮತ್ತು ಸಂಸ್ಕರಿಸಿದ ನೀರಿಗಾಗಿ 10 ಲ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ, ಪರಿಸರ ಸಂರಣೆಗಾಗಿ ಶೂನ್ಯ ದ್ರವ ವಿಸರ್ಜನೆ ತಂತ್ರಾನ ಹೊಂದಿರುವ ಅತ್ಯಾಧುನಿಕ 2.5 ಝಡ್ಎಲ್ಡಿ ಸಾಮರ್ಥ್ಯದ ಸಾಮಾನ್ಯ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಟಕ ಮತ್ತು ಅದಕ್ಕೆ ಪೂರಕವಾದ ಪೈಪ್ಲೈನ್ ಜಾಲದ ಸ್ಥಾಪನೆ ಕಾರ್ಯ ಆರಂಭಗೊಳ್ಳಲಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಎಸ್, ಜವಳಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಹಾಗೂ ವಿಸಿ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಇತರರು ಪಾಲ್ಗೊಂಡಿದ್ದರು.
"
ಕಲಬುರಗಿ ಜವಳಿ ಪಾರ್ಕ್ನಲ್ಲಿ ಭೂಗತ ಹೈ&ಟೆನ್ಷನ್/ಲೋ&ಟೆನ್ಷನ್ ವಿದ್ಯುತ್ ವಿತರಣಾ ಮಾರ್ಗಗಳು ಮತ್ತು ಪರಿಸರ ಸ್ನೇಹಿ ಸೋಲಾರ್ ಬೀದಿ ದೀಪಗಳ ಅಳವಡಿಸುವ ಪ್ರಕ್ರಿಯೆಯೂ ಜತೆ ಜತೆಯಲ್ಲೇ ನಡೆಯಲಿದೆ.
— ಪ್ರಿಯಾಂಕ್ ಖರ್ಗೆ, ಗೃಹ ಸಚಿವರು.