- ಸೇತುಬಂಧ ಕಾರ್ಯಕ್ರಮದ ಪೂರ್ವಪರೀಕ್ಷೆ ಮತ್ತು ಸಾಫಲ್ಯ ಪರೀಕ್ಷೆಗಳ ಶ್ರೇಣಿಗಳನ್ನು ಸ್ಯಾಟ್ಸ್‌ನಲ್ಲಿ ದಾಖಲಿಸುವುದು ಕಡ್ಡಾಯ.
- ಪ್ರಾಂಶುಪಾಲರು, ಸೇತುಬಂಧ ನೋಡಲ್ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಸಂಬಂಧಿಸಿದ ಅಧಿಕಾರಿಗಳು ಇದೇ ಜೂ.25ರೊಳಗೆ ಈ ಮಾಹಿತಿಯನ್ನು ಸ್ಯಾಟ್ಸ್‌ನಲ್ಲಿ ದಾಖಲಿಸಬೇಕು
- ಕಲಿಕಾ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಇಲಾಖೆಯು ನಿರ್ದೇಶನ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಸೇತುಬಂಧ ಕಾರ್ಯಕ್ರಮವನ್ನು ಜೂ.25ರೊಳಗೆ ಪೂರ್ಣಗೊಳಿಸಿ, ಅಂಕಗಳನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಡಿಎಸ್‌ಇಆರ್‌ಟಿ) ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಶಾಲಾ ಮಟ್ಟದಲ್ಲಿ ನಡೆಯುತ್ತಿರುವ ಸೇತುಬಂಧ ಕಾರ್ಯಕ್ರಮದ ಪೂರ್ವಪರೀಕ್ಷೆ ಮತ್ತು ಸಾಫಲ್ಯ ಪರೀಕ್ಷೆಗಳ ಶ್ರೇಣಿಗಳನ್ನು ಸ್ಯಾಟ್ಸ್‌ನಲ್ಲಿ ದಾಖಲಿಸುವುದು ಕಡ್ಡಾಯ. ಪ್ರಾಂಶುಪಾಲರು, ಸೇತುಬಂಧ ನೋಡಲ್ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಸಂಬಂಧಿಸಿದ ಅಧಿಕಾರಿಗಳು ಇದೇ ಜೂ.25ರೊಳಗೆ ಈ ಮಾಹಿತಿಯನ್ನು ಸ್ಯಾಟ್ಸ್‌ನಲ್ಲಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.
ಪರೀಕ್ಷೆಯಲ್ಲಿ ’ಬಿ’ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರಾತ್ಮಕ ಕ್ರಮ ಮತ್ತು ಅವರ ಕಲಿಕಾ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಇಲಾಖೆಯು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್‌ನಲ್ಲಿ ಈ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಡಿಎಸ್‌ಇಆರ್‌ಟಿ ಸೂಚಿಸಿದೆ.