ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಬ್ರಾಹ್ಮಣ ಮಹಾಸಭಾ ಮುಖಂಡರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರಿಗೆ ಮನವಿ ಸಲ್ಲಿಸಿದರು.  
ರಾಜ್ಯ

ಜನಿವಾರ ತೆಗಿಸಿರುವುದು ಸರಿಯಲ್ಲ

ಬಾಗಲಕೋಟೆ: ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣದಲ್ಲಿ ತಪ್ಪಿತಸ್ಥ ಕಾಲೇಜು, ಅಽಕಾರಿಗಳ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಭಾ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುಖಂಡರು ಅಽಕಾರಿಗಳು, ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರಿಗೆ ಮನವಿ ಸಲ್ಲಿಸಿದರು.
ಜನಿವಾರವು ಬ್ರಾಹ್ಮಣ ಸಮುದಾಯದವರಿಗೆ ಕೇವಲ ದಾರವಲ್ಲ. ಅದು ದಾರ್ಮಿಕ ನಂಬಿಕೆ, ಸಂಸ್ಕೃತಿ, ಸಂಪ್ರದಾಯ, ಆತ್ಮಗೌರವದ ಪ್ರತೀಕವಾಗಿದೆ. ಇದನ್ನು ತೆಗೆದಿಟ್ಟು ಪರೀಕ್ಷೆ ಬರಯಲು ಅವಕಾಶ ನೀಡಿದ್ದು, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ದೂರಿದರು.
ಬೆಂಗಳೂರಿನ ಮಡಿವಾಳದ ಕೃಪಾನಿಽ ಕಾಲೇಜು ಹಾಗೂ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಕೂಡಲೇ ಇದಕ್ಕೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಗುರುತುಗಳಿಗೆ ಧಕ್ಕೆ ಉಂಟಾಗದAತೆ ಸ್ಪಷ್ಟ ಮಾರ್ಗಸೂಚಿ ರಚಿಸಬೇಕು. ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು. ಕೇವಲ ಭರವಸೆಯಲ್ಲಿ ಕಾಲ ಹರಣ ಮಾಡಬಾರದು ಎಂದು ಆಗ್ರಹಿಸಿದರು.
ಗುರುರಾಜ ಕುಲಕರ್ಣಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೋಹಿನಿ ಗಾಂವಕರ, ದ.ರಾ.ಪುರೋಹಿತ, ಪ್ರಹ್ಲಾದ ಹುಯಿಲಗೋಳ, ಸತ್ಯನಾರಾಯಣ ಗುಡಿ, ಅರುಣ ದೇಸಾಯಿ, ಕೆ.ಬಿ.ದೇಸಾಯಿ, ಅನಂತ ಮಳಗಿ, ಬದರಿಆಚಾರ್ಯ ಗುಡಿ, ಶ್ರೀಹರಿ ಡಂಬಳ, ಅರುಣ ಕುಲಕರ್ಣಿ, ಅಕ್ಷರಾ ಕುಲಕರ್ಣಿ, ಆನಂದ ಕಲಕೇರಿ ಮತ್ತಿತರರು ಇದ್ದರು.