ಬೆಂಗಳೂರು:
ಬಿಡದಿ ಉಪನಗರ ಯೋಜನೆಯನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದು ದೊಡ್ಡ ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಬಿಡದಿ ಭಾಗದ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕವಾಗಿ ಬಿಡದಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಸಜ್ಜಾಗಿದ್ದವು. ಜೆಡಿಎಸ್ ನಾಯಕರು ಜು.31 ಮತ್ತು ಆ.1, 2 ರಂದು ಪಾದಯಾತ್ರೆಯ ದಿನಾಂಕವನ್ನು ೋಷಣೆ ಮಾಡಿದ್ದರು.
ಇದರ ನಡುವೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದಿಂದ ಪಾದಯಾತ್ರೆಯನ್ನು ಮುಂದೂಡುವ ನಿರ್ಧಾರಕ್ಕೆ ಮುಖಂಡರು ಬಂದಿದ್ದಾರೆ. 30ಕ್ಕೆ ಚೆನ್ನಮ್ಮ ಅವರ ಕಾರ್ಯಗಳು ಇರುವ ಹಿನ್ನೆಲೆಯಲ್ಲಿ ದೇವೇಗೌಡರ ಇಡೀ ಕುಟುಂಬ ತೊಡಗಿಸಿಕೊಳ್ಳಲಿದೆ. ಆದರಿಂದ ಮಾರನೇ ದಿನವೇ ಪಾದಯಾತ್ರೆ ನಡೆಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಹೊಸ ದಿನಾಂಕ ೋಷಣೆಗೆ ಮುಖಂಡರು ನಿರ್ಧಾರ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ತನ್ನ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲು ಮುಂದಾಗಿದೆ.