ರಾಜ್ಯ

ಕಲಬುರಗಿಯಲ್ಲಿ ಏಪ್ರಿಲ್ 8 ರಂದು ಉದ್ಯೋಗ ಮೇಳ

ಕಲಬುರಗಿ : ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಏಪ್ರಿಲ್ 8ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳÀವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಎಚ್.ಸಿ.ಜಿ. ಕ್ಯಾನ್ಸರ್ ಸೆಂಟರ್‍ದಲ್ಲಿ ಡ್ಯೂಟಿ ಡಾಕ್ಟರ್ ಹುದ್ದೆಗೆ ಎಮ್.ಬಿ.ಬಿ.ಎಸ್ ಹಾಗೂ ನರ್ಸ್ ಹುದ್ದೆಗೆ ಜಿ.ಎನ್.ಎಮ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 22 ರಿಂದ 35 ವರ್ಷದೊಳಗಿರಬೇಕು. ಗುರು ದೀಕ್ಷಾ ಅಕಾಡೆÀಮಿಯಲ್ಲಿ ಟೀಚಿಂಗ್ ಫ್ಯಾಕಲ್ಟಿ ಅಡ್ಮಿನಿಸ್ಟ್ರೇಟಿವ್ ಮಾರ್ಕೆಟಿಂಗ್ ಎಕ್ಸಿಕ್ಯೊಟಿವ್ ಹುದ್ದೆಗೆ ಯಾವುದೇ ಪದವಿ /ಎಮ್.ಬಿ.ಎ. ಪಾಸಾಗಿರಬೇಕು. ವಯೋಮಿತಿ 23 ರಿಂದ 30 ವರ್ಷದೊಳಗಿರಬೇಕು.
ಅನ್ನಪೂರ್ಣ ಮೈಕ್ರೋ ಫೈನಾನ್ಸ್‍ದಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ / ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 25 ರೊಳಗಿರಬೇಕು. ವಿ.ಐ. ದಲ್ಲಿ ಸೇಲ್ಸ್ ಎಕ್ಸಿಕ್ಯೊಟಿವ್ ಹುದ್ದೆಗೆ 10ನೇ /ಪಿಯುಸಿ / ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ಸ್ವತಂತ್ರ ಮೈಕ್ರೊ ಫೈನಾನ್‍ದಲ್ಲಿ ಫೀಲ್ಡ್ ಆಫೀಸರ್ಸ್ ಮತ್ತು ಕಲೆಕ್ಷನ್ ಆಫೀಸರ್ ಹುದ್ದೆಗೆ ಪಿಯುಸಿ/ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಕಲಬುರಗಿ ಎಸ್.ಆರ್.ಜೆ. ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‍ದಲ್ಲಿ ಶಿಕ್ಷಕರ ಹುದ್ದೆಗೆ ಪಿಯುಸಿ/ಯಾವುದೇ ಪದವಿ ಮತ್ತು ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, 9036069143 ಗೆ ಸಂಪರ್ಕಿಸಲು ಕೋರಲಾಗಿದೆ.