ಘಟ್ಟಿರಡ್ಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಚಾರಣೆ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಗದ್ದಿಕೇರಿ ಮಾತನಾಡಿದರು. ಆರೋಗ್ಯ ಸುರಕ್ಷತಾ ಅಧಿಕಾರಿ ಸುಜಾತಾ ಇಟಗಿ ಹಾಗೂ ವಿದ್ಯಾರ್ಥಿಗಳಿದ್ದರು.  
ರಾಜ್ಯ

ಮಲೇರಿಯಾ ನಿರ್ಮೂಲನೆಗೆ ಕೈಜೋಡಿಸಿ

JAGADEESH KUMBAR
ಅಳವಂಡಿ: ಮಲೇರಿಯಾಮುಕ್ತ ಸಮಾಜ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಜವಾಬ್ದಾರಿಯ ಜತೆಗೆ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ನಾಗರಿಕರ ಕರ್ತವ್ಯವಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಗದ್ದಿಕೇರಿ ತಿಳಿಸಿದರು.
ಘಟ್ಟಿರಡ್ಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ, ಕವಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಚಾರಣೆ ನಿಮಿತ್ತ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. 
ಕಾರ್ಯಕ್ರಮದಲ್ಲಿ ಮಲೇರಿಯಾ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಲಾಯಿತು. ಮುಖ್ಯ ಶಿಕ್ಷಕ ಮಹಮದ್ ರಫಿ, ಶಿಕ್ಷಕಿಯರಾದ ಕಾವ್ಯಾ, ಗಂಗಮ್ಮ, ನೇತ್ರಾ ಇತರರಿದ್ದರು.