ಆನೇಕಲ್ನ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ನ್ಯಾಯಾಧೀಶ ಕೆ.ಕೃಷ್ಣರಾಜ್ ಉದ್ಘಾಟಿಸಿದರು. ವಕೀಲರ ಸಂದ ಖಜಾಂಚಿ ಶಾರದಾಮಣಿ, ವಕೀಲರಾದ ಎಂ.ಎ.ಶಿವರಾಜು, ಶ್ರೀಕಂಠಾಚಾರ್, ನೇತ್ರಾವತಿ ಇದ್ದರು.
ಆನೇಕಲ್ : ಕಾನೂನು ನೆರವು ಅರಿವು ಕಾರ್ಯಕ್ರಮಗಳ ಬಗ್ಗೆ ಇಲಾಖೆಗಳ ಅಧಿಕಾರಿಗಳು ರ್ನಿಲ್ಯ ವಹಿಸುತ್ತಿರುವುದು ಶೋಚನೀಯ ಎಂದು ನ್ಯಾಯಾಧೀಶ ಕೆ.ಕೃಷ್ಣರಾಜ್ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರಿಗೆ ಕಾನೂನಿನ ನೆರವು ನೀಡಬೇಕೆಂದು ಕಾರ್ಯಕ್ರಮ ರೂಪಿಸಲಾಗಿದೆ. ಆದರೆ ಅತಿಥಿಗಳು, ಅಧಿಕಾರಿಗಳು ಗೈರಾಗುವ ಮೂಲಕ ಕಾರ್ಯಕ್ರಮವ ಮುಖ್ಯ ಉದ್ದೇಶದ ದಾರಿ ತಪ್ಪಿಸಿದ್ದಾರೆ. ಪೂರ್ವಭಾವಿ ಸಭೆ ಕೈಗೊಂಡ ನಿರ್ಧಾರಗಳನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಲು ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳು, ಮಹಿಳೆಯರು, ಶೋಷಿತ ವರ್ಗಗಳ ಹಕ್ಕು ಮತ್ತು ನ್ಯಾಯವನ್ನು ರಸಬೇಕು ಎಂಬುದು ಕಾರ್ಯಕ್ರಮದ ಗುರಿಯಾಗಿದೆ. ಸಮಾಜದಲ್ಲಿ ಅರಿವು ಮತ್ತು ಾನ ಇಲ್ಲದಿದ್ದರೆ ಹೆಚ್ಚು ಮೋಸವಾಗುತ್ತದೆ. ಹಾಗಾಗಿ ಮೋಸ, ವಂಚನೆಯಿಂದ ತಪ್ಪಿಸಿಕೊಳ್ಳಲು ಕಾನೂನಿನ ಾನ ಅವಶ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಆನೇಕಲ್ ನ್ಯಾಯಾಲಯದ ನ್ಯಾಯಾಧೀಶ ಕೆ.ಕೃಷ್ಣರಾಜ್ ಅವರು ಅಸಮಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮ ನಿರೂಪನೆ, ಉದ್ಘಾಟನೆ ಸೇರಿದಂತೆ ವಿವಿಧ ಸಿದ್ಧತೆಗಳಲ್ಲಿ ರ್ನಿಲ್ಯ ತೋರಲಾಗಿದೆ ಎಂದು ಸಿಟ್ಟಾದರು.
ಸರ್ಕಾರಿ ಅಭಿಯೋಜಕ ವಿನೋದ್ ಕುಮಾರ್ ಮಾತನಾಡಿ, ಭಾರತದಲ್ಲಿ ಹಲವಾರು ಜಾತಿ ಧರ್ಮಗಳಿದ್ದರೂ ನಮ್ಮೆಲ್ಲರಿಗೂ ಸಂವಿಧಾನವೇ ಧರ್ಮ ಗ್ರಂಥವಾಗಿದೆ. ಹಾಗಾಗಿ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ತಲುಪಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.