ಮದ್ದೂರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಕೆ.ಅರ್.ಮಹೇಶ್ ಇತರರು ಇದ್ದರು. 
ರಾಜ್ಯ

ಕದಲೂರು ರಾಮಕೃಷ್ಣಗೆ ಸೂಕ್ತ ಸ್ಥಾನ ಮಾನ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಮದ್ದೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ
  • ಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ
ಮದ್ದೂರು: ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಳೆದ 25 ವರ್ಷಗಳಿಂದ ದುಡಿದಿರುವ ಮದ್ದೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಅವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದು ನನ್ನ ಬಯಕೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂಗಿತ ವ್ಯಕ್ತಪಡಿಸಿದರು.
ತಾಲೂಕಿನ ನಿಡಘಟ್ಟ ಬಳಿ ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ, ಸಚಿವನಾಗಿದ್ದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕದಲೂರು ರಾಮಕೃಷ್ಣ ಅವರು ಪಕ್ಷದ ಸಂಘಟನೆಗೆ ಹೆಚ್ಚು ಹೊತ್ತು ನೀಡಿದ್ದರು. ಇಂತಹವರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನ ಮಾನ ನೀಡುವುದರಿಂದ ಪಕ್ಷಕ್ಕೆ ಹೆಚ್ಚಿನ ಗೌರವ ಸಿಗಲಿದೆ ಎಂದರು.