ಬೆಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಶೈಕ್ಷಣಿಕ ಪ್ರವಾಸಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದರು.
- ಬೀದರ್ ವಿಶ್ವವಿದ್ಯಾಲಯದ ಐವರು ವಿದ್ಯಾರ್ಥಿಗಳ ಆಯ್ಕೆ
- ಇವರಲ್ಲಿ ಮೂವರು ಎಸ್ಎಸ್ಕೆಬಿ ಕಾಲೇಜಿನವರು
ಬಸವಕಲ್ಯಾಣ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿ ನಗರದ ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ, ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದ ಮೂವರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕುರಿತು ತುಲಾನಾತಕ್ಮ ಅಧ್ಯಯನಕ್ಕಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕರ್ನಾಟಕ ಸರ್ಕಾರ ಮತ್ತು ಯುಕೆ (ಇಂಗ್ಲೆಂಡ್) ಪ್ರತಿಷ್ಠಿತ ವೆಲ್ಫೋರ್ಟನ್ ವಿಶ್ವವಿದ್ಯಾಲಯದ ಪ್ರಾಯೋಜಕತ್ವದ ಜಂಟಿ ಸ್ಕೌಟ್ ಕಾರ್ಯಕ್ರಮದಡಿ ಅಂತಾರಾಷ್ಟ್ರೀಯ ಶೈಕ್ಷಣಿಕ ಪ್ರವಾಸಕ್ಕೆ ಬೀದರ್ ವಿಶ್ವವಿದ್ಯಾಲಯದಿಂದ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ ಎಸ್ಎಸ್ಕೆಬಿ ಕಾಲೇಜಿನ ಸ್ವಾತಿ ದತ್ತಾತ್ರೇಯ ಬಟಗೇರಾ, ಜಕೀಯಾ ಬೇಗಂ ಅನ್ಸರ್ ಅಲಿ ಚಿತ್ತಕೊಟ್ಟಾ(ಕೆ) ಮತ್ತು ಶಿವಲಿಂಗಪ್ಪ ಅಂಬಾರಾಯ ಎಕಲೂರ ಸೇರಿದ್ದಾರೆ.
ಶೈಕ್ಷಣಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಕಾಲೇಜಿನ ಮೂವರು ಅಸಾಧಾರಣ ಶೈಕ್ಷಣಿಕ ಸಾಧನೆ, ನಾಯಕತ್ವ ಗುಣ ಹಾಗೂ ನಾನಾ ಸ್ಪರ್ಧೆಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನ ಪರಿಗಣಿಸಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿದ್ದು, ಜೂ.27ರಂದು ಪ್ರಯಾಣ ಬೆಳಸಲಿದ್ದಾರೆ.
ವಿದೇಶಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಸನ್ಮಾನಿಸಿ ಪ್ರವಾಸಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂದ ಅಧ್ಯಕ್ಷರಾದ ಮಾತೋಶ್ರೀ ಡಾ.ದಾಾಯಿಣಿ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ, ಕಾಲೇಜು ಪ್ರಾಚಾರ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.