ಚಿಕ್ಕನಾಯಕನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿmeeting ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಹರ್ಷ, ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಪಿ.ಹರೀಶ್​, ಉಪಾಧ್ಯಕ್ಷ ಕೆ.ಜಿ.ಕೃಷ್ಣೆಗೌಡ ಇದ್ದರು. 
ರಾಜ್ಯ

25ರಂದು ಕೆಂಪೇಗೌಡ ಜಯಂತಿ ಆಚರಣೆ meeting

ಚಿಕ್ಕನಾಯಕನಹಳ್ಳಿ :ತಾಲೂಕು ಆಡಳಿತ, ತಾಲೂಕು ಒಕ್ಕಲಿಗರ ಸಂಘ ಹಾಗೂ ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದಿಂದ ಜು.25ರಂದು ಕೆಂಪೇಗೌಡ ಜಯಂತಿ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಹರ್ಷ ತಿಳಿಸಿದರು.
ತಾಲೂಕಿನ ಪ್ರವಾಸಿ ಮಂದಿರದಲ್ಲಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವ ವಿ.ಸೋಮಣ್ಣ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.meeting
ಶಾಸಕ ಸಿ.ಬಿ.ಸುರೇಶ್​ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಹರ್ಷ ಟಿ.ಎಂ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಶಾಸಕರಾದ ಟಿ.ಬಿ.ಜಯಚಂದ್ರ, ಎಸ್​.ಆರ್​.ಶ್ರೀನಿವಾಸ್​, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್​ ಸದಸ್ಯ ಚಿದಾನಂದ್​ ಎಂ.ಗೌಡ, ಆರ್​.ರಾಜೇಂದ್ರ, ಡಿ.ಟಿ.ಶ್ರೀನಿವಾಸ್​, ರಮೇಶ್​ ಬಾಬು, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್​ ಆಗಮಿಸಲಿದ್ದಾರೆ ಎಂದರು.
ಪದಾಧಿಕಾರಿಗಳಾದ ಸಂದೇಶ್​ ಗೌಡ, ರಾಮಯ್ಯ, ನಿರಂಜನ್​ ಮೂರ್ತಿ, ಪಿ.ಎಲ್​. ರೇಣುಕಪ್ರಸಾದ್​, ಯಶ್ವಂತ್​, ಶಿವಶಂಕರಪ್ಪ, ಲಿಂಗರಾಜು, ಭಾಸ್ಕರ್​, ಲಕ್ಷಿ$್ಮಕಾಂತ್​ ಇದ್ದರು.