ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಭೆ ಸೇರಿದ್ದ ಒಕ್ಕಲಿಗ ಸಮುದಾಯದ ಮುಖಂಡರು. 
ರಾಜ್ಯ

29ರಂದು ಕೆಂಪೇಗೌಡ ಜಯಂತಿ ಆಚರಣೆ

ಬೇಲೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ. 29ರಂದು ಸೋಮವಾರ ಒಕ್ಕಲಿಗ ಸಮುದಾಯದಿಂದ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಿ.ಗಿರೀಶ್ ತಿಳಿಸಿದರು.
ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಒಕ್ಕಲಿಗರ ಸಂಘದ ಸಭೆಯ ನಂತರ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕನ್ನಡ ನಾಡಿನ ಶ್ರೇಷ್ಠ ಆಡಳಿತಗಾರರು, ದೂರದೃಷ್ಟಿಯ ನಾಯಕರು ಹಾಗೂ ಸಮಾಜದ ಏಳಿಗೆಗಾಗಿ ಶ್ರಮಿಸಿದ ಮಹನೀಯರು. ಅವರ ಆದರ್ಶಗಳು ಮತ್ತು ಕೊಡುಗೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಯಂತಿಯನ್ನು ವಿಜೃಂಭಣೆಯಿಂದ. ಪ್ರತಿ ವರ್ಷದಂತೆ ಸೋಮವಾರ ಆಚರಿಸುತ್ತಿದ್ದು, ಒಕ್ಕಲಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ.ದಿನೇಶ್ ಮಾತನಾಡಿ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಹಾಸನದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಒಕ್ಕಲಿಗರ ಸಮುದಾಯ ಭವನದಲ್ಲಿ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಲಿದೆ ಎಂದರು.
ಪುರಸಭೆ ಸದಸ್ಯ ಭರತ್, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತಿಗೌಡ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಪೈಂಟ್ ರವಿ, ಸಮಾಜದ ಮುಖಂಡರಾದ ಸಿ.ಎಂ.ಪೃಥ್ವಿ, ಸತೀಶ್, ನಾರಾಯಣ, ಭರತ್, ಪುಟ್ಟಸ್ವಾಮಿಗೌಡ, ದೀಪು, ಸತ್ಯನಾರಾಯಣ, ಗಣೇಶ್, ಒಕ್ಕಲಿಗ ನೌಕರರ ಸಂಘದ ಅಧ್ಯಕ್ಷ ರಮೇಶ್, ಗೌರವಾಧ್ಯಕ್ಷ ಕಾಂತರಾಜು ಸೇರಿದಂತೆ ಇತರರಿದ್ದರು.