ನವದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ರ್ಖಗೆ ಅವರ 84ನೇ ಜನ್ಮದಿನದ ಅಂಗವಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್ ಹೂಗುಚ್ಛ ನೀಡಿ ಶುಭಾಶಯ ಕೋರಿದರು.
ಹುಮನಾಬಾದ್: ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಅಪಾರವಾಗಿದೆ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ್ ಹೇಳಿದರು.
ಪಟ್ಟಣದ ಮಾಜಿ ಸಚಿವ ರಾಜಶೇಖರ ಪಾಟೀಲ್ ಗೃಹ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರ್ಖಗೆ ಅವರ 84ನೇ ಜನ್ಮದಿನ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು, 371(ಜೆ) ವಿಧಿ ಜಾರಿಗೊಳಿಸುವಲ್ಲಿ ರ್ಖಗೆ ಪಾತ್ರ ಮಹತ್ವದ್ದಾಗಿದ್ದು, ಈ ಭಾಗದ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ದೊರೆಯುವಂತಾಗಿದೆ ಎಂದರು.
ಬಳಿಕ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ವಿತರಿಸಿದರು. ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅಫ್ಸರ್ಮಿಯಾ, ಉಮೇಶ ಜಮಗಿ, ಮಲ್ಲಿಕಾರ್ಜುನ ಮಾಳಶಟ್ಟಿ, ಮಹೇಶ ಅಗಡಿ, ಗಣೇಶ ಪಾಟೀಲ್, ಸುರೇಶ ಘಾಂಗ್ರೆ, ಮುಕ್ರಮ ಜಾ, ವಿಜಯಕುಮಾರ ನಾತೆ, ಶ್ರೀನಾಥ ದೇವಣಿ, ಮಾರುತಿ ಕಂದಾರಿ, ದೇವೇಂದ್ರ ಪೋಲಾ, ಅವಿನಾಶ ಪೊಲದಾಸ್, ಮನೋಜ ಕೊಟೇಕರ,ಲಖನ್ ಕೋಳಿವಾಡ, ಶಿವಾನಂದ ಕಟ್ಟಿಮನಿ, ನರಸಪ್ಪ ಪರಸನೋರ್ ಇತರರಿದ್ದರು.