ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ ಮಾಡಿದ ಘಟನೆ ಖಂಡಿಸಿ ಹುಮನಾಬಾದ್ನಲ್ಲಿ ಭಾನುವಾರ ಮಾಜಿ ಸಚಿವ ರಾಜಶೇಖರ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್, ಅರವಿಂದ ಅರಳಿ, ಧನರಾಜ ತಾಳಂಪಳ್ಳಿ ಹಾಗೂ ಪಕ್ಷದ ಪ್ರಮುಖರು ಇದ್ದರು.
- ಕಾಂಗ್ರೆಸ್ನಿಂದ ಹುಮನಾಬಾದ್ನಲ್ಲಿ ಪ್ರತಿಭಟನೆ
- ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಹುಮನಾಬಾದ್: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದ ಹಲ್ದವಾನಿಯಲ್ಲಿ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ ಮಾಡಿದ ಘಟನೆ ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ನಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಳೇ ತಹಸಿಲ್ ಕಚೇರಿಯಿಂದ ಡಾ.ಅಂಬೇಡ್ಕರ್ ವೃತ್ತದವರೆಗೆ ಮಾಜಿ ಸಚಿವ ರಾಜಶೇಖರ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಪ್ರಮುಖರು, ಅತ್ಯಂತ ಹಿರಿಯ ರಾಜಕೀಯ ನಾಯಕರು, ಅಲ್ಲದೆ ದೇಶದ ಪ್ರಮುಖ ಹುದ್ದೆಯಲ್ಲಿರುವ ಡಾ.ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಹಾಗೂ ಆರ್ಎಸ್ಎಸ್ ಕುಮ್ಮಕ್ಕಿನಿಂದ ಶುದ್ಧೀಕರಣಗೊಳಿಸುವ ಮೂಲಕ ಅವಮಾನ ಮಾಡಿರುವುದು ಕೃತ್ಯ ಖಂಡನೀಯವಾಗಿದೆ. ಇದು ಇಡೀ ದೇಶಕ್ಕೆ ಮಾಡಿದ ಅವಮಾನವಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದರು.
ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಜಗದೀಶ್ ಚೌರ ಅವರಿಗೆ ಸಲ್ಲಿಸಿದರು.
ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್, ಮಾಜಿ ಎಂಎಲ್ಸಿ ಅರವಿಂದ ಅರಳಿ, ಪಕ್ಷದ ಮುಖಂಡರಾದ ಧನರಾಜ ತಾಳಂಪಳ್ಳಿ, ಲಕ್ಷ್ಮಣರಾವ ಬುಳ್ಳಾ, ರಮೇಶ ಡಾಕುಳಗಿ, ಶ್ರೀಮಂತ ಪಾಟೀಲ್, ಮಲ್ಲಿಕಾರ್ಜುನ ಮಾಳಶಟ್ಟಿ, ಕಂಟೆಪ್ಪ ದಾನ, ಮಲ್ಲಿಕಾರ್ಜುನ ಮಹೇಂದ್ರಕರ್, ದತ್ತಕುಮಾರ ಚಿದ್ರಿ, ಉಮೇಶ ಕುಲಕರ್ಣಿ, ಅಫ್ಸರ್ಮಿಯಾ, ಓಂಕಾರ ತುಂಬಾ, ವಿಜಯಕುಮಾರ ನಾತೆ, ಉಮೇಶ ಜಮಗಿ, ಲಕ್ಷ್ಮೀ ಪುತ್ರ ಮಾಳಿಗೆ, ಸುರೇಶ ಘಾಂಗ್ರೆ, ಯಾಸಿನ್ ಅಲಿ ಸೇರಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ಅತ್ಯಂತ ಖಂಡನೀಯ. ಶುದ್ಧೀಕರಣದ ಹೆಸರಲ್ಲಿ ಬಿಜೆಪಿಯುವರು ಮಾಡಿದ ಕೆಲಸ ಇಡೀ ದೇಶ ತಲೆ ತಗ್ಗಿಸುವಂತದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.
— -> ರಾಜಶೇಖರ ಪಾಟೀಲ ಮಾಜಿ ಸಚಿವ