ಕರಗಾಂವ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಕೆಎಲ್‌ಇ ಸಂಸ್ಥೆ ನಿರ್ದೇಶಕ ಬಸವರಾಜ ಪಾಟೀಲ ಮಾತನಾಡಿದರು. ರಾಜು ಪಾಟೀಲ, ಡಾ.ಮುರುೇಶ ಕುರಣಿ, ಎಂ.ಟಿ.ಕುರಣಿ, ರಾಜು ಪಾಟೀಲ, ಬಾಬಾಗೌಡ ಪಾಟೀಲ ಇತರರಿದ್ದರು.
ಕಾಹೆರ ಕುಲಾಧಿಪತಿ ಡಾ.ಪ್ರಭಾಕರ ಕೋರೆ ದೂರದೃಷ್ಟಿ ಫಲವಾಗಿ ಕೆಎಲ್‌ಇ ಸಂಸ್ಥೆ ಗ್ರಾಮೀಣ ಭಾಗದ ಸಾಮಾನ್ಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿದೆ. ಇದರಿಂದ ಗ್ರಾಮೀಣ ಜನತೆಗೆ ಅನುಕೂಲವಾಗಿದೆ ಎಂದು ಕೆಎಲ್‌ಇ ಸಂಸ್ಥೆ ನಿರ್ದೇಶಕ ಬಸವರಾಜ ಪಾಟೀಲ ಹೇಳಿದರು.
ಉದ್ಘಾಟಿಸಿ ಮಾತನಾಡಿ, ಆರೋಗ್ಯ ಸೇವೆ ನಿರಂತರವಾಗಿ ಮುಂದುವರಿಸಲು ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ಕೆಎಲ್‌ಇ ಸಂಸ್ಥೆ ಪ್ರಯತ್ನಗಳು ಮುಂದುವರಿಯಲಿವೆ ಎಂದು ಹೇಳಿದರು.
ಡಾ.ಮುರುೇಶ ಕುರಣಿ ಮಾತನಾಡಿ, ಆರೋಗ್ಯ ದೇವರು ನೀಡಿದ ಅಮೂಲ್ಯ ಕೊಡುಗೆಯಾಗಿದೆ. ಅದನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರ ಸೇವನೆ ಹಾಗೂ ನಿಯಮಿತ ವ್ಯಾಯಾಮ ಅಗತ್ಯ. ಒತ್ತಡದ ಜೀವನಶೈಲಿಯಲ್ಲಿ ಅನೇಕರು ಆರೋಗ್ಯ ಕುರಿತು ನಿರ್ಲಕ್ಷ್ಯವಹಿಸುತ್ತಿದ್ದು, ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ. ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದರು.
ಬಸವಪ್ರಭು ಕೋರೆ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎಂ.ಟಿ.ಕುರಣಿ, ರಾಜು ಪಾಟೀಲ, ಬಾಬಾಗೌಡ ಪಾಟೀಲ, ಬಾಳು ಕುರಣಿ, ಪ್ರಶಾಂತ ಪೂಜಾರಿ ಇತರರಿದ್ದರು. ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಅಧಿಕಾರಿ ಪ್ರಶಾಂತ ಪೂಜಾರಿ ನಿರೂಪಿಸಿದರು.