ಕಾರ್ಮಿಕ ಕಿಟ್ ವಿತರಿಸಿದ ಪ್ರಿಯಾಂಕಾ ಜಾರಕಿಹೊಳಿ
- ಕಾರ್ಮಿಕ ಕಿಟ್ ವಿತರಿಸಿದ ಪ್ರಿಯಾಂಕಾ ಜಾರಕಿಹೊಳಿ
- ಯಮಕನಮರಡಿಲಿ ಕಾರ್ಮಿಕ ಕಿಟ್ ವಿತರಣೆ
- ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ ಎಂದ ಪ್ರಿಯಾಂಕಾ
ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ
| ಸಂಸದೆ ಪ್ರಿಯಾಂಕ ಜಾರಕಿಹೊಳಿ ಸಲಹೆ | ಕಿಟ್ ವಿತರಣೆ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ
ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಒದಗಿಸಲು ಒತ್ತು ನೀಡುವುದರ ಜತೆಗೆ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಫಲಾನುಭವಿಗಳಿಗೆ ಕಿಟ್ ವಿತರಣೆ ಕಾರ್ಯಕ್ರಮ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರವು ಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಗ್ರಾಮದಲ್ಲಿ ೧ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಮಿಕ ಇಲಾಖೆಯ ತಾಲೂಕು ಅಧಿಕಾರಿ ಮಹಾಂತೇಶ ಹಿರೇಮಠ,ಮುಖಂಡರಾದ ಈರಣ್ಣ ಬಿಸಿರೊಟ್ಟಿ, ಕಿರಣ ರಜಪೂತ,ಮಹಾಂತೇಶ ಮಗದುಮ್ಮ, ಓಂಕಾರï ತುಬಚಿ, ಶಂಕರ ತೆಗೂರಿ, ಶೇಖರ ಬಡಿಗೇರ, ಏಕನಾಥ ಬಡಿಗೇರ, ಅಭಿಜಿತ ಪಾಟೀಲ, ಶರೀಫ್ ಬೇಪಾರಿ, ಶಿವಶಂಕರ ಜುಟ್ಟಿ, ಶೌಕತ್ ಖಾಜಿ, ಗುಲಾಬ ರಜಪೂತ, ಮಹೇಶ ಬಡಿಗೇರ, ಈರಣ್ಣ ದಿನ್ನಿಮನಿ, ಪಿಡಿಒ ಆನಂದ ಹೊಳೆನ್ನವರ ಇತರರಿದ್ದರು.