Learn the history of the Koregaon War
ಮಧುಗಿರಿ: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರು ಪ್ರತಿ ಗ್ರಾಮದಲ್ಲಿ ಭೀಮಾ ಕೋರೆಗಾಂವ್ ಯುದ್ಧದ ವಿಜಯೋತ್ಸವದ ಚರಿತ್ರೆಯನ್ನು ಜನರಿಗೆ ತಿಳಿಸಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಸಮಾಜಕಲ್ಯಾಣ ಇಲಾಖೆ ಹಾಗೂ ದಲಿತಪರ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ ಯುದ್ಧದ ವಿಜಯೋತ್ಸವದಲ್ಲಿ ಮಾತನಾಡಿ, ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್ ಯುದ್ಧ. ಭೀಮಾ ನದಿ ದಡದಲ್ಲಿ ಪೇಶ್ವೆ ಸೇನೆ ಹಾಗೂ ಮಹಾರ್ ಸೈನಿಕರ ಮಧ್ಯೆ ನಡೆದ ಯುದ್ಧದಲ್ಲಿ ಮಹರ್ ಸೈನಿಕರು ಶೌರ್ಯ ಮೆರೆದಿದ್ದಾರೆ. 30 ಸಾವಿರ ಪೇಶ್ವೆಗಳನ್ನು 500 ಮಹಾರ್ ಸೈನಿಕರು ಸೋಲಿಸಿ ವಿಜಯಪತಾಕೆ ಹಾರಿಸಿದ ದಿನವನ್ನು ಕೋರೆಗಾಂವ್ ವಿಜಯೋತ್ಸವವಾಗಿ ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪ-----ೃಷ್ಯತೆ, ಮೇಲು&ಕೀಳುಗಳ ವಿರುದ್ಧ ನಿಂತು ಮಾನವೀಯ ವೌಲ್ಯಗಳನ್ನು ಪಡೆದು ಕೊಳ್ಳಲು ಹಂಬಲಿಸುವ ಮಹಾರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವಾಗಿದ್ದು, ಇಂತಹ ಯುದ್ಧದ ಇತಿಹಾಸಗಳನ್ನು ತಿಳಿಯಬೇಕಿದೆ ಎಂದರು.
ದಸಾಪ ತಾಲೂಕು ಅಧ್ಯಕ್ಷ ಮಹರಾಜು ಮಾತನಾಡಿ, ದಲಿತರ ಸ್ವಾಭಿಮಾನದ ಪ್ರತಿಕ, ದಲಿತರ ಅಸ್ಮಿತೆಯ ಸಂಕೇತವಾಗಿರುವ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಇಂದಿನ ಯುವ ಪೀಳಿಗೆ ತಿಳಿಯಬೇಕಿದೆ. ಕೋರೆಗಾಂವ್ ಯುದ್ಧದ ಇತಿಹಾಸವನ್ನು ಈ ದೇಶದ ಮೇಲ್ವರ್ಗದ ಪರವಾಗಿರುವ ಇತಿಹಾಸಕಾರರು ಮರೆಮಾಚಿದ್ದರು. ಅಂಬೇಡ್ಕರ್ ಅವರು ಮಹಾರ್ ಇತಿಹಾಸ ಅಧ್ಯಯನ ಮಾಡುವ ಸಮಯದಲ್ಲಿ ಕೋರೆಗಾಂವ್ ಯುದ್ಧದ ಇತಿಹಾಸವನ್ನು ತಿಳಿದು ಅದನ್ನು ಇಡೀ ಜಗ್ಗತ್ತಿಗೆ ತಿಳಿಸಿದ್ದಾರೆ ಎಂದರು.
ದಲಿತ ಸಂಘರ್ಷ ಸಮಿತಿಯ ಎಸ್.ಕೆ.ರಂಗನಾಥ್, ಎಂ.ವೈ.ಶಿವಕುಮಾರ್, ಕೆಪಿಸಿಸಿ ಶಿಕ್ಷಕರ ಘಟಕದ ಜಿಲ್ಲಾಧ್ಯಕ್ಷ ವೆಂಕಟರಾಮು, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರಾಮ್ ಪ್ರಸಾದ್, ಮಹೇಶ್,ಮನೋಜ್ ಇದ್ದರು.