ಕಲಿಕಾ ಸಾಮಗ್ರಿ ಮಕ್ಕಳಿಗೆ ಪೂರಕ children
ಗೌರಿಬಿದನೂರು: ವಿದ್ಯಾರ್ಥಿಗಳ ಕಲಿಕೆ ಪುಸ್ತಕ, ಇತರ ಪರಿಕರ ವಿತರಣೆ ಉಪಯುಕ್ತ ಕಾರ್ಯ. ಇಂತಹ ನೆರವು ಮಕ್ಕಳಲ್ಲಿ ಶಾಲೆ ಬಗ್ಗೆ ಆಸಕ್ತಿ ಹೆಚ್ಚಿಸುವ ಜತೆಗೆ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಸೀಡ್ ವರ್ಕ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವ್ಯವಸ್ಥಾಪಕ ತಿಪ್ಪೇಸ್ವಾಮಿ ಹೇಳಿದರು.children
ತಾಲೂಕಿನ ಕೆಂಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೀಡ್ಸ್ ವರ್ಕ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರಿನ ಘಟಕ, ಊಟದ ತಟೆ&ಲೋಟ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ನೀಡಿರುವ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಶಿಸ್ತು, ಪರಿಶ್ರಮ ಮತ್ತು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದರು.