Let children receive a cultured education. 
ರಾಜ್ಯ

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯಲಿ

ಕೊರಟಗೆರೆ: ಮಕ್ಕಳಿಗಾಗಿ ಪಾಲಕರು ಹಣ ಸಂಪಾದಿಸುವುದಕ್ಕಿಂತ, ಸರಿಯಾದ ಸಮಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತೀಳಿಸಿದರು.
ಮಂಗಳವಾರ ಪಟ್ಟಣದ ಹೊರವಲಯದಲ್ಲಿರುವ ಜೆ.ಕೆ.ಮೆಮೋರಿಯಲ್​ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿ, ಮಕ್ಕಳನ್ನು ಧರ್ಮ ಮತ್ತು ಸಂಸ್ಕಾರದ ಹಾದಿಯಲ್ಲಿ ನಡೆಸುವ ಜವಾಬ್ದಾರಿ ಪಾಲಕರು ಮತ್ತು ಶಾಲೆಗಳ ಮೇಲಿದೆ. ಆಟ&ಪಾಠಗಳಿಂದ ವಂಚಿತ ಮಕ್ಕಳ ಜೀವನ ಶೂನ್ಯವಾಗುತ್ತದೆ. ಇಂದಿನ ಮಕ್ಕಳು ಅತ್ಯಂತ ಬುದ್ಧಿವಂತರು, ಅವರನ್ನು ಕೇವಲ ಸ್ಪರ್ಧಾತ್ಮಕ ಜಗತ್ತಿಗೆ ತಯಾರಿಸುವುದಷ್ಟೇ ಅಲ್ಲ, ಸಂಸ್ಕಾರಯುತ ಶಿಕ್ಷಣ ನೀಡುವುದು ಅವಶ್ಯ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್​ ಬೇಗಂ ಮಾತನಾಡಿ, ಪ್ರಪಂಚದ ಅತ್ಯುತ್ತಮ ಗ್ರಂಥವೆಂದರೆ ಭಗವದ್ಗೀತೆ ಇದು ಮಕ್ಕಳಿಗೆ ಜೀವನದ ಅನುಭವ ಬೋಧನೆ ನೀಡುತ್ತದೆ. ಮಕ್ಕಳಲ್ಲಿ ಉತ್ತಮ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು, ಆರೋಗ್ಯವಂತ ಮಗುವಿನಿಂದ ಮಾತ್ರ ಸದೃಢ ಸಮಾಜ ನಿಮಾರ್ಣ ಸಾಧ್ಯವಾಗುತ್ತದೆ. ಆದ್ದರಿಂದ ಪಾಲಕರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಸಂಸ್ಥೆಯ ಅಧ್ಯಕ್ಷ ಡಾ.ಆರ್​.ಮಲ್ಲಿಕಾರ್ಜುನ್​ ಮಾತನಾಡಿ, ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕೆಂಬ ಧ್ಯೇಯದಿಂದ ಸಂಸ್ಥೆಯನ್ನು ಸ್ಥಾಪಿಸಿ ಬೆಳೆಸಲಾಗಿದೆ. ಕೇವಲ ಪಠ್ಯಾಧಾರಿತ ಶಿಕ್ಷಣಕ್ಕೆ ಸೀಮಿತವಾಗದೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ಪಪಂ ಸದಸ್ಯ ಕೆ.ಎನ್​.ಲಕ್ಷಿ$್ಮನಾರಾಯಣ್​, ನಿವೃತ್ತ ಪ್ರಾಂಶುಪಾಲ ಕೆ.ಎಸ್​.ಈರಣ್ಣ, ಪ್ರಾಂಶುಪಾಲ ಕೆ.ಸುಭಾಷ್​, ಉಪ ಪ್ರಾಂಶುಪಾಲೆ ವಸುಂಧರ ಮತ್ತಿತರರು ಇದ್ದರು.