Let dairy farming become a business for farmers.
ಕೋಲಾರ: ಹಾಲು ಉತ್ಪಾದನೆಯು ಕೇವಲ ಉಪಕಸುಬಾಗಿರದೆ ಪ್ರತ್ಯೇಕ ಲಾಭದಾಯಕ ಉದ್ಯಮವಾಗಿ ಬೆಳೆಯಬೇಕಿದೆ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.
ವೇಮಗಲ್ ಹೋಬಳಿ ಚನ್ನಸಂದ್ರದ ಹಾಲು ಉತ್ಪಾದಕರ ಸಹಕಾರ ಸಂದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದರು.
ರೈತರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಿದರೆ ಉತ್ತಮ ಆದಾಯ ಗಳಿಸಲು ಸಾಧ್ಯ. ಕೃಷಿ ಉತ್ಪನ್ನಗಳ ಬೆಲೆ ಏರಿಳಿತವಾಗುವ ಸಂದರ್ಭದಲ್ಲಿ ಹಾಲಿಗೆ ನಿಗದಿತ ಬೆಲೆ ದೊರೆಯುವುದರಿಂದ ಹೈನುಗಾರಿಕೆ ರೈತರಿಗೆ ಸ್ಥಿರ ಆದಾಯದ ಮೂಲವಾಗಿದೆ ಎಂದು ತಿಳಿಸಿದರು.
ಕೋಮುಲ್ ಒಕ್ಕೂಟದಿಂದ ದೊರೆಯುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಮತ್ತಷ್ಟು ಅಭಿವೃದ್ಧಿ ಹೊಂದಬೇಕು ಹಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂದರು.
ಸಭೆಯಲ್ಲಿ ಸಂದ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಸಂವು 20 ಲಕ್ಷ ರೂ. ಆದಾಯ ಗಳಿಸಿದ್ದು,11 ಲಕ್ಷ ರೂ. ವೆಚ್ಚ ಮಾಡಿ 9 ಲಕ್ಷ ನಿವ್ವಳ ಲಾಭ ದಾಖಲಿಸಿರುವುದಾಗಿ ತಿಳಿಸಿದರು.
ರಮೇಶ್, ಚನ್ನಸಂದ್ರ ಡೇರಿ ಸಂದ ಅಧ್ಯಕ್ಷ ಮಂಜುನಾಥ್, ಉಪಾಧ್ಯೆ ಲ್ಮ, ಕಾರ್ಯದರ್ಶಿ ಶಿವಾನಂದ್ ಇದ್ದರು.