ಕುದೂರು ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಿಡಿಒ ಸತೀಶ್, ಗ್ರಾಪಂ ಮಾಜಿ ಅಧ್ಯಕ್ಷೆ ಸಂಧ್ಯಾ, ಕೆ.ಬಿ.ಬಾಲರಾಜು, ಶಂಕರ್, ಗಿರೀಶ್, ಜಯರಾಮ್, ಸಿಬ್ಬಂದಿ ನಾರಾಯಣ್, ಗೋಪಿ ಇತರರಿದ್ದರು.
ದೇಶದ ಏಕತೆ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಪಿಡಿಒ ಸತೀಶ್ ಹೇಳಿದರು.
ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಪಾಲಿಸಿ, ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯವನ್ನು ಕೇವಲ ಸಂಭ್ರಮಿಸುವುದಷ್ಟೇ ಅಲ್ಲದೆ, ಅದರ ಮೌಲ್ಯವನ್ನು ಅರಿತು ಬಾಳಬೇಕು ಎಂದರು.