ಅರಸೀಕೆರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಂತೋಷ್‌ಕುಮಾರ್, ಪರಶಿವಮೂರ್ತಿ, ವಿಜಯ್ ಕುಮಾರ್, ಧರ್ಮಶೇಖರ್, ಕೃಷ್ಣಮೂರ್ತಿ ಇತರರಿದ್ದರು.
- ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್
- ವೆಂಕಟೇಶ್ವರ ಕಲಾಭವನ
ಅರಸೀಕೆರೆ: ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಮತ್ತು ಎತ್ತಿಹಿಡಿಯುವ ಹೊಣೆಗಾರಿಕೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಹೇಳಿದರು.
ತಾಲೂಕು ಆಡಳಿತ, ನಗರಸಭೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ವೆಂಕಟೇಶ್ವರ ಕಲಾಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಲ್ಲಿ ಮಾತನಾಡಿದರು.
ರಾಜಪ್ರಭುತ್ವ, ಸರ್ವಾಧಿಕಾರವನ್ನು ಅಂತ್ಯಗೊಳಿಸಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವವನ್ನು ಜಾರಿಗೆ ತರಲಾಗಿದೆ. ಐತಿಹಾಸಿಕ ವ್ಯವಸ್ಥೆಯ ಮಹತ್ವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದೆ ಎಂದು ತಿಳಿಸಿದರು.
ಸಂವಿಧಾನ, ಪ್ರಜಾಪ್ರಭುತ್ವ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ ಎಂಬುದನ್ನು ಮರೆಯಬಾರದು. ಜ್ಞಾನ, ವಿಜ್ಞಾನ, ತಂತ್ರಜ್ಞಾನ ಯುಗದಲ್ಲಿ ಹೊಸ ಹೊಸ ವಿಷಯಗಳು ಅವಿಷ್ಕಾರಗೊಳ್ಳುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್ ಗೀಜಿಹಳ್ಳಿ ಮಾತನಾಡಿ, ಶಾಸಕಾಂಗ , ಕಾರ್ಯಾಂಗ ಮತ್ತು ನ್ಯಾಯಾಂಗ ಕ್ಷೇತ್ರಗಳು ನಿರಂತರ ಚಟುವಟಿಕೆಯ ಮೂಲಕ ಪ್ರಜಾಪ್ರಭುತ್ವಕ್ಕೆ ವಿಶೇಷ ಶಕ್ತಿ ನೀಡಿವೆ ಎಂದರು.
ವಕೀಲ ವಿಜಯಕುಮಾರ್ ಮಾತನಾಡಿ, ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆಗೆ ಭಾರತೀಯ ಪ್ರಜಾಪ್ರಭುತ್ವದಲ್ಲಿ ತನ್ನದೇ ಆದ ಮಹತ್ವ ಪಡೆದಿದೆ. ಅಬ್ರಹಾಂ ಲಿಂಕನ್ ಅಭಿಪ್ರಾಯದಂತೆ ಸರ್ಕಾರದ ಹೆಸರಿನಲ್ಲಿ ಪ್ರಜಾಪ್ರಭುತ್ವ ಮೂಲಕ ಪ್ರಜೆಗಳಿಗೋಸ್ಕರ ರಚಿಸಿಕೊಂಡ ಕಟ್ಟು ಪಾಡುಗಳಾಗಿವೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಜತೆಗೆ ನಾಲ್ಕನೇ ಅಂಗವಗಿ ಮಾಧ್ಯಮ ರಂಗವಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪ ನಿರ್ದೇಶಕ ಪರಶಿವಮೂರ್ತಿ, ಯುವ ವಕೀಲ ಯಶವಂತ್ ಮಾತನಾಡಿದರು. ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಜಿಲ್ಲಾ ದಿಶಾ ಸಮಿತಿ ಸದಸ್ಯೆ ಮಂಜುಳಾ ಚಂದ್ರನಾಯ್ಕ, ವೆಂಕಟೇಶ್ ಶೆಟ್ಟಿ, ನಗರಸಭೆ ಮಾಜಿ ಸದಸ್ಯ ಭಾಸ್ಕರ್, ದಲಿತ ಸಂಘಟನೆ ಮುಖಂಡರಾದ ಬಾಣಾವರ ವೆಂಕಟೇಶ್, ರಾಜಣ್ಣ, ಎ.ಪಿ ಚಂದ್ರಪ್ಪ, ಸೆಸ್ಕ್ ನಿರ್ದೇಶಕ ಮಲ್ಲಿದೇವಿಹಳ್ಳಿ ಮಂಜುನಾಥ್ ಇತರರಿದ್ದರು.