Let Parameshwara be the Chief Minister.
ಕೊರಟಗೆರೆ: ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿಯಾಗಲಿ ಎಂದು ತಾಲೂಕಿನ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ವಿಶೇಷವಾಗಿ ಪೂಜೆ ಸಲ್ಲಿಸಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ ಮಾತನಾಡಿ, ಡಾ.ಜಿ.ಪರಮೇಶ್ವರ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2013 ಮತ್ತು 2018ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಮಹತ್ವದ ಪಾತ್ರ ವಹಿಸಿದ್ದಾರೆ. ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕೆಂಬ ಜನಮನದ ಕೂಗು ಹೆಚ್ಚಿದ್ದು, ಸಿಎಂ ಬದಲಾವಣೆಯಾದಲ್ಲಿ ಡಾ.ಜಿ.ಪರಮೇಶ್ವರ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕರೆ ಶಂಕರ್ ಮಾತನಾಡಿ, ಡಾ.ಜಿ.ಪರಮೇಶ್ವರ ಕಳಂಕ ರಹಿತ ಸ್ವಚ್ಛ ರಾಜಕಾರಣಿ, ಎಲ್ಲ ವರ್ಗಗಳ ನಾಯಕರಾಗಿದ್ದು, ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿದ್ದಾರೆ. 40 ವರ್ಷಗಳ ರಾಜಕೀಯ ಅನುಭವವನ್ನು ಪಕ್ಷದ ವರಿಷ್ಠರು ಗುರುತಿಸಿ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದರು.
ತಾಪಂ ಮಾಜಿ ಅಧ್ಯಕ್ಷ ಟಿ.ಸಿ.ರಾಮಯ್ಯ, ತಾಲೂಕು ಯೂತ್ ಮಾಜಿ ಅಧ್ಯಕ್ಷವಿನಯ್ ಕುಮಾರ್, ಮುಖಂಡರಾದ ಜಯರಾಮ್, ಎಲ್.ರಾಜಣ್ಣ ಮತ್ತಿತರರು ಇದ್ದರು.