ಜನರು ಕಣ್ಣು ತಪಾಸಣೆ ಮಾಡಿಸಿಕೊಳ್ಳಲಿ eyes
ಗೌರಿಬಿದನೂರು: ಕಣ್ಣು ಮನುಷ್ಯನ ಪ್ರಮುಖ ಅಂಗವಾಗಿದ್ದು, ದೃಷ್ಟಿ ಕಳೆದುಕೊಂಡರೆ ಜೀವನಪೂರ್ತಿ ಕತ್ತಲಲ್ಲಿ ಕಳೆಯಬೇಕಾಗುತ್ತದೆ. ಆದ್ದರಿಂದ ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಶ್ರೇಣಿಕ್ ತಿಳಿಸಿದರು.eyes
ನಗರದ ಮುನೇಶ್ವರ ಬಡಾವಣೆಯ ಲಯನ್ಸ್ ಕಣ್ಣು ತಪಾಸಣಾ ಕೇಂದ್ರದಲ್ಲಿ ಲಯನ್ಸ್ ಕ್ಲಬ್, ಲಯನ್ಸ್ ಸೇವಾ ಟ್ರಸ್ಟ್, ಬೆಂಗಳೂರಿನ ಲಯನ್ಸ್ ಸೂಪರ್ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 230ನೇ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.
ಸ್ಥಳಿಯ ಲಯನ್ಸ್ ಸಂಸ್ಥೆ ಮತ್ತು ಸೇವಾ ಟ್ರಸ್ಟ್, ದಾನಿಗಳ ನೆರವಿನಿಂದ ಪ್ರತಿ ತಿಂಗಳು 2ನೇ ಭಾನುವಾರ ನಗರದ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಕಣ್ಣು ತಪಾಸಣೆ ಶಿಬಿರ ನಡೆಯುತ್ತದೆ. ಜನ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಶಿಬಿರದಲ್ಲಿ ಒಟ್ಟು 106 ಜನ ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು. 36 ಜನರಲ್ಲಿ ದೃಷ್ಟಿ ದೋಷ ಕಂಡು ಬಂದಿದ್ದು, ಅವರನ್ನು ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಯಿತು.