ವಿಜಯಪುರದ ಎವರ್ಗ್ರೀನ್ ಸ್ಕೂಲ್ ಮತ್ತು ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಟ್ರಸ್ಟ್ನ 35ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಡಾ.ಪಿ. ಪೃಥ್ವಿ ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ನ ನಿಕಟಪೂರ್ವ ಅಧ್ಯಕ್ಷ ಅನಿಲ್ಕುಮಾರ್ ಇತರರು ಇದ್ದರು.
ವಿಜಯಪುರ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ವೇದಗಾನ ಎಜುಕೇಷನ್ ಆ್ಯಂಡ್ ಡೆವಲಪ್ಮೆಂಟ್ ಟ್ರಸ್ಟ್ನ ನಿಕಟಪೂರ್ವ ಅಧ್ಯಕ್ಷ ಸಿ.ಎನ್. ರಾಮಯ್ಯ ತಿಳಿಸಿದರು.
ಪಟ್ಟಣದ ಎವರ್ಗ್ರೀನ್ ಸ್ಕೂಲ್ ಮತ್ತು ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಟ್ರಸ್ಟ್ನ 35ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಬೆಂಗಳೂರಿನ ಬಿ.ಎಂ.ಎಸ್. ಕಾಲೇಜಿನ ಮುಖ್ಯಸ್ಥ ಪ್ರೊ.ವಿ.ಆರ್. ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಗಳ ವ್ಯಾಮೋಹದಿಂದ ದೂರವಿರಬೇಕು. ಓದಿನ ಕಡೆಗೆ ಹೆಚ್ಚಿನ ಗಮನ ಹರಿಸುವ ಮೂಲಕ ಸಾಧಕರ ಜೀವನದಿಂದ ಸ್ಫೂರ್ತಿ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಶಾಲಾ ಮುಖ್ಯಶಿಕ್ಷಕಿ ಆರ್.ಸವಿತಾ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರು ಸಹಕಾರ ಅತ್ಯಗತ್ಯ. ಪಾಲಕರು ಮತ್ತು ಶಿಕ್ಷಕರ ಜಂಟಿ ಪ್ರಯತ್ನದಿಂದ ಮಾತ್ರ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯ ಎಂದರು. ಶಾಲೆಯಲ್ಲಿ 10 ವರ್ಷಗಳ ಕಾಲ ಸುದೀರ್ ಸೇವೆ ಸಲ್ಲಿಸಿದ ಶಿಕ್ಷಕರಾದ ವಿ.ರಮೇಶ್, ವಿ.ರಮ್ಯಾ, ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ಡಾ.ಪಿ.ಪೃಥ್ವಿ ಅವರನ್ನು ಸನ್ಮಾನಿಸಲಾಯಿತು.