ಇಂಡಿ ಪಟ್ಟಣದ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಿಮಿತ್ತ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು. ಸಂಸ್ಥೆ ಅಧ್ಯಕ್ಷ ಡಿ.ಆರ್. ಶಹಾ, ನಜೀರ್ ಹುಂಡೇಕರ ಇತರರಿದ್ದರು.
- ನಜೀರ್ ಹುಂಡೇಕರ ಹೇಳಿಕೆ
- ಪ್ರಾರಂಭೋತ್ಸವ ಸಂಭ್ರಮ
ಇಂಡಿ : ಪ್ರತಿದಿನ ವಿದ್ಯಾರ್ಥಿಗಳು ಹೊಸತನ ಹಾಗೂ ಹೊಸ ಕಲಿಕೆಯಲ್ಲಿ ಸನ್ನದ್ಧರಾಗಬೇಕು. ಶಿಕ್ಷಣ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ಜೀವನ ಕೌಶಲ ಬೆಳೆಸುವಂತಿರಬೇಕು ಎಂದು ಶಾಲೆ ಶೈಕ್ಷಣಿಕ ಮಾರ್ಗದರ್ಶಕ ನಜೀರ್ ಹುಂಡೇಕರ ತಿಳಿಸಿದರು.
ಪಟ್ಟಣದ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮ, ಸಡಗರದಿಂದ ನೆರವೇರಿತು.
ಪ್ರಾಂಶುಪಾಲ ಪ್ರಕಾಶ ಪಾಟೀಲ ಹೊಸ ಶೈಕ್ಷಣಿಕ ವರ್ಷದ ಆರಂಭದ ನಿಮಿತ್ತ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಸಂಸ್ಥೆ ಅಧ್ಯಕ್ಷ ಡಿ.ಆರ್. ಶಹಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭ ಹಾರೈಸಿದರು. ಸೌಮ್ಯಶ್ರೀ ಚಕ್ರಪಾಣಿ ನಿರೂಪಿಸಿದರು. ಸಚಿನ್ ಮುಚ್ಚಂಡಿ ವಂದಿಸಿದರು.
ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಇತರರಿದ್ದರು.