ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ, ಲ್ಯಾಬ್, ಸೆಮಿನಾರ್ ಹಾಲ್ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಶಂಕುಸ್ಥಪಾನೆ ಮಾಡಿದರು. ಶಿವಶರಣರೆಡ್ಡಿ ಪಾಟೀಲ್, ನಾಗೇಶ್ವರರಾವ ಮಾಲಿಪಾಟೀಲ್, ಬಸವರಾಜ ಪಾಟೀಲ್, ಡಾ.ಪಂಡಿತ ಬಿ.ಕೆ, ನಾಗೇಶ ಕಾಳಾ ಇದ್ದರು.
- ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅನಿಸಿಕೆ
- ಗ್ರಂಥಾಲಯ, ಲ್ಯಾಬ್, ಸೆಮಿನಾರ್ ಹಾಲ್ ನಿರ್ಮಾಣಕ್ಕೆ ಚಾಲನೆ
ಸೇಡಂ: ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಾವಿರಾರು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡು ಸದೃಢ ಬದುಕು ಕಟ್ಟಿಕೊಳ್ಳಬೇಕು ಎಂದು ವೈದ್ಯಕಿಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 3 ಕೋಟಿ ರೂ. ವೆಚ್ಚದ ಡಿಜಿಟಲ್ ಗ್ರಂಥಾಲಯ, 5 ಕೋಟಿ ರೂ. ವೆಚ್ಚದ ಲ್ಯಾಬ್ ಮತ್ತು ಸೆಮಿನಾರ್ ಹಾಲ್ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕಲಬುರಗಿಯ ಸರ್ಕಾರಿ ಪದವಿ ಕಾಲೇಜು ಬಿಟ್ಟರೆ ಅತೀ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಕಾಲೇಜು ಇದಾಗಿದೆ. ಸುಮಾರು 2 ಸಾವಿರಕ್ಕೂ ಅಧಿಕ ಮಕ್ಕಳು ಇಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಹೀಗಾಗಿ ನಿಮ್ಮ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇರಿ ಹಲವು ಸೌಕರ್ಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ ಮಾಲಿಪಾಟೀಲ್, ಪ್ರಾಂಶುಪಾಲ ಡಾ.ಪಂಡಿತ ಬಿ.ಕೆ. ಮಾತನಾಡಿದರು.
ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ್ ಊಡಗಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೀಯಾಂಕಾ ಧನಶ್ರೀ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಬೊಮ್ನಳ್ಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ರೈಟ್ಸ್ ಲಿಮಿಟೆಡ್ನ ಸಹಾಯಕ ವ್ಯವಸ್ಥಾಪಕ ಸಚಿನ್ ಅವಟಿ, ಪ್ರಮುಖರಾದ ಅಬ್ದುಲ್ ಹಫೀಜ್, ನಾಗೇಶ ಕಾಳಾ, ರಾಹುಲ್ ಊಡಗಿ, ಭೀಮಾಶಂಕರ ಕೊಳ್ಳಿ, ಜಗನ್ನಾಥ ಚಿಂತಪಳ್ಳಿ, ಸತೀಶ ಪೂಜಾರಿ, ಡಾ.ಜಗನ್ನಾಥ ಪಟ್ಟಣಕರ್ ಇತರರಿದ್ದರು.